ಉಡುಪಿ; ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ‘ಚಿರಾಗ್ ಫೆಸ್ಟ್’

ಉಡುಪಿ, ಡಿ.10: ಜಮಾಅತೆ ಇಸ್ಲಾಮಿ ಹಿಂದ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಾನವೀಯ ಮೌಲ್ಯಗಳು ಪ್ರವಾದಿ ಜೀವನದ ಬೆಳಕಿನಲ್ಲಿ ಅಭಿಯಾನದ ಅಂಗವಾಗಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಚಿತ್ರ ಕಲಾ, ಸ್ಪೋಗನ್ ರೂಟಿಂಗ್ಸ್ ಸೇರಿದಂತೆ ವಿವಿಧ ಸ್ಪರ್ಧೆಗಳ ‘ಚಿರಾಗ್ ಫೆಸ್ಟ್’ನ್ನು ರವಿವಾರ ಆಯೋಜಿಸಲಾಗಿತ್ತು.
ಅಧ್ಯಕ್ಷತೆಯನ್ನು ಸದ್ಭಾವನಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ ವಹಿಸಿದ್ದರು. ಗ್ರಾಮಾಭಿವೃದ್ದಿ ಇಲಾಖೆಯ ಅಧಿಕಾರಿ ವಾಸಂತಿ ಅಂಬಲಪಾಡಿ, ಪ್ರಜಾಪತಿ ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಉಡುಪಿ ಸೇವಾ ಕೇಂದ್ರದ ಜಿಲ್ಲಾ ಸಂಚಾಲಕಿ ಕೆ.ಸುಮಾ ಮುಖ್ಯ ಅತಿಥಿಗಳಾಗಿದ್ದರು.
ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಜಮೀಲಾ ಹೂಡೆ ಸ್ವಾಗತಿಸಿದರು. ಫರ್‌ಹತ್ ದಾವೂದ್ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
Next Story