Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಾಜಪೇಯಿ ದೂರದೃಷ್ಟಿಯ ನಾಯಕ:...

ವಾಜಪೇಯಿ ದೂರದೃಷ್ಟಿಯ ನಾಯಕ: ಮುಖ್ಯಮಂತ್ರಿ ಕುಮಾರಸ್ವಾಮಿ

ಚಳಿಗಾಲದ ಅಧಿವೇಶನ

ವಾರ್ತಾಭಾರತಿವಾರ್ತಾಭಾರತಿ10 Dec 2018 10:21 PM IST
share
ವಾಜಪೇಯಿ ದೂರದೃಷ್ಟಿಯ ನಾಯಕ: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಳಗಾವಿ, ಡಿ.10: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಅವರು ದೂರದೃಷ್ಟಿಯ ನಾಯಕರಾಗಿದ್ದರು. ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದರು.

ಚಳಿಗಾಲದ ವಿಧಾನಸಭೆಯ ಅಧಿವೇಶನದ ಮೊದಲ ದಿನವಾದ ಇಂದು ವಿಧಾನಸಭಾಧ್ಯಕ್ಷ ರಮೇಶ್‍ ಕುಮಾರ್ ಅವರು ಮಂಡಿಸಿದ ಸಂತಾಪ ಸೂಚಕ ಪ್ರಸ್ತಾವನೆ ಮೇಲೆ ಮಾತನಾಡಿದ ಮುಖ್ಯಮಂತ್ರಿ, ಗ್ರಾಮ ಸಡಕ್, ಸರ್ವಶಿಕ್ಷಣ ಅಭಿಯಾನ, ಸುವರ್ಣ ಚತುಷ್ಪಥ ಯೋಜನೆ, ಕೋಕ್ರಾನ್ ಅಣು ಪರೀಕ್ಷೆ ವಾಜಪೇಯಿ ಅವರ ದೂರದೃಷ್ಟಿ ನಾಯಕತ್ವಕ್ಕೆ ಉದಾಹರಣೆಯಾಗಿವೆ ಎಂದರು.

ಭಾರತ-ಪಾಕಿಸ್ತಾನದ ನಡುವೆ ಸೌಹಾರ್ದತೆ ಇರಬೇಕೆಂದು ಬಯಸಿದ್ದ ವಾಜಪೇಯಿ ಅವರು ಈ ಎರಡು ದೇಶಗಳ ನಡುವೆ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದರು. ಆದರೆ, ಪಾಕಿಸ್ತಾನ ವಾಜಪೇಯಿ ಅವರ ವಿಶಾಲ ಹೃದಯವನ್ನು ಅರ್ಥ ಮಾಡಿಕೊಳ್ಳದೆ ದುರುಪಯೋಗ ಪಡಿಸಿಕೊಂಡಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸಚಿವರಾಗಿದ್ದ ಅನಂತ್‍ ಕುಮಾರ್ ಅವರ ಸಾವು ಅಚ್ಚರಿಯ ಜತೆಗೆ ನೋವನ್ನೂ ತಂದಿದೆ. ಉತ್ತಮ ಸಂಸದೀಯ ಪಟುವಾಗಿದ್ದ ಅನಂತ್‍ ಕುಮಾರ್ ಅವರು ಆರು ಬಾರಿ ಸಂಸದರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅದೇ ರೀತಿ ಜಾಫರ್ ಶರೀಫ್ ಅವರು ಏಳು ಬಾರಿ ಸಂಸದರಾಗಿ ರೈಲ್ವೆ ಇಲಾಖೆಯಲ್ಲಿ ರಾಜ್ಯ ಮತ್ತು ದೇಶಕ್ಕೆ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಸ್ಮರಿಸಿದರು.

ಇತ್ತೀಚೆಗೆ ನಮ್ಮನಗಲಿದ ಅಂಬರೀಶ್ ಅವರು ಉತ್ತಮ ಸ್ನೇಹ ಜೀವಿ, ರಾಜಕೀಯದಲ್ಲಿ ತಮ್ಮದೇ ಆದ ರೀತಿಯಲ್ಲಿ ಚಾಪು ಮೂಡಿಸಿದ್ದವರು. ಸಿನಿಮಾ ಹಂಚಿಕೆದಾರನಾಗಿ ವೃತ್ತಿ ಜೀವನ ಆರಂಭಿಸಿದ ನನಗೆ ಅವರೊಂದಿಗೆ ಉತ್ತಮ ಒಡನಾಟವಿತ್ತು. ಕಾವೇರಿ ವಿವಾದದ ಸಂದರ್ಭದಲ್ಲಿ ಅಂಬರೀಶ್ ಅವರು ಕುರ್ಚಿಗೆ ಅಂಟಿಕೊಳ್ಳದೆ ಸಚಿವ ಸ್ಥಾನವನ್ನು ಧಿಕ್ಕರಿಸಿ ರಾಜ್ಯದ ಪರವಾಗಿ ನಿಂತವರು ಎಂದು ಕೊಂಡಾಡಿದರು. ಅದೇ ರೀತಿ ಇತ್ತೀಚೆಗೆ ನಿಧನರಾದ ಮಾಜಿ ಸಚಿವರು ಹಾಗೂ ಮಾಜಿ ಶಾಸಕರ ಗುಣಗಾನ ಮಾಡಿದರು.

ಪ್ರತಿ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ವಾಜಪೇಯಿ ಅತ್ಯುತ್ತಮ ಕವಿ, ಬರಹಗಾರರಾಗಿದ್ದರು. ಅವರ ಸಾವು ದೇಶಕ್ಕೆ ಮತ್ತು ಬಿಜೆಪಿಗೆ ತುಂಬಲಾರದ ನಷ್ಟ ಉಂಟು ಮಾಡಿದೆ. ಅವರು ಕರ್ನಾಟಕಕ್ಕೆ ಭೇಟಿ ನೀಡಿದಾಗಲೆಲ್ಲಾ ನಾನು ಅವರ ಜತೆ ಇರುತ್ತಿದ್ದೆ. ರಾಜ್ಯದಲ್ಲಿ ಸುಮಾರು 40ರಿಂದ 50 ಸಭೆಗಳಲ್ಲಿ ನಾನು ಅವರ ಜತೆ ಭಾಗವಹಿಸಿದ್ದೆ. ವಾಜಪೇಯಿ ಸ್ವತಂತ್ರ ಭಾರತದ ಅಜಾತ ಶತ್ರು. 10 ಬಾರಿ ಸಂಸದರಾಗಿ, 8 ಬಾರಿ ರಾಜ್ಯಸಭಾ ಸದಸ್ಯರಾಗಿ, ವಿವಿಧ ಸಚಿವಾಲಯಗಳ ಮುಖ್ಯಸ್ಥರಾಗಿ, ಪ್ರಧಾನಿಯಾಗಿ ಅವರ ಸೇವೆ ಅವಿಸ್ಮರಣೀಯ ಎಂದರು.

ಕೇಂದ್ರದ ಸಚಿವರಾಗಿದ್ದ ಅನಂತ್‍ ಕುಮಾರ್ ನನಗೆ ಆತ್ಮೀಯ ಸ್ನೇಹಿತರು. ಬೆಂಗಳೂರಿಗೆ ಬಂದು ಹೈಕೋರ್ಟ್ ವಕೀಲರಾಗಿ ಕೆಲಸ ಮಾಡುತ್ತೇನೆ ಎಂದು ಮುಂದಾದಾಗ ನಾನು ಬಾಬೂರಾವ್ ದೇಶಪಾಂಡೆ ಅವರ ಕೊಠಡಿ ಸಂಖ್ಯೆ 154ರಲ್ಲಿ ಅನಂತ್‍ ಕುಮಾರ್ ಅವರ ಜತೆ ಮಾತುಕತೆ ನಡೆಸಿ ರಾಜಕೀಯದಲ್ಲಿ ನಿಮಗೆ ಉತ್ತಮ ಭವಿಷ್ಯವಿದೆ ಎಂದು ಸಲಹೆ ನೀಡಿದ್ದೆ. ಅದರಂತೆ ಅವರು ಕರಿಕೋಟ್ ಕಳಚಿ ರಾಜಕೀಯದಲ್ಲಿ ತೊಡಗಿಸಿಕೊಂಡರು. ನಾವಿಬ್ಬರೂ ಜತೆಯಾಗಿ ಪಕ್ಷ ಕಟ್ಟಿದ್ದೇವೆ. ಅವರಿಲ್ಲದೇ ಇರುವ ಬಿಜೆಪಿಯನ್ನು ಊಹಿಸಿಕೊಳ್ಳುವುದು ಕಷ್ಟ ಎಂದು ಹೇಳಿದರು. ಅಂಬರೀಶ್ ಉತ್ತಮ ನಾಯಕ ನಟರಾಗಿದ್ದರು. ರಾಜಕಾರಣದಲ್ಲಿ ತಮ್ಮದೇ  ಆದ ಚಾಪು ಮೂಡಿಸಿದ್ದರು ಎಂದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಬೈರೇಗೌಡ ಮಾತನಾಡಿ, ವಾಜಪೇಯಿ ಬಲಪಂಥೀಯರಾಗಿದ್ದರೂ ಅವರ ವಿಚಾರಗಳು ದೂರದೃಷ್ಟಿಯಿಂದ ಕೂಡಿದ್ದವು. ಹಾಗಾಗಿ ವಾಜಪೇಯಿ ಅವರನ್ನು ಪಕ್ಷಾತೀತವಾಗಿ ಅಭಿಮಾನಿಸುವ ಜನ ಇದ್ದರು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X