ಸಭಾಪತಿಯಾಗಿ ಪ್ರತಾಪ್ ಚಂದ್ರ ಶೆಟ್ಟಿ: ಸಚಿವ ಖಾದರ್ ಹರ್ಷ

ಮಂಗಳೂರು, ಡಿ.11: ವಿಧಾನ ಪರಿಷತ್ ಸಭಾಪತಿಯಾಗಿ ಕರಾವಳಿಯ ಹಿರಿಯ ಮುಖಂಡ ಕೆ. ಪ್ರತಾಪ್ ಚಂದ್ರ ಶೆಟ್ಟಿ ಅವಿರೋಧವಾಗಿ ಆಯ್ಕೆ ಯಾಗಿರುವುದಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹರ್ಷ ವ್ಯಕ್ತಪಡಿಸಿದ್ದಾರೆ.
ಅವಿಭಜಿತ ಜಿಲ್ಲೆಯ ಹಿರಿಯ ಮುತ್ಸದ್ಧಿಯಾಗಿರುವ ಪ್ರತಾಪ್ ಚಂದ್ರ, ಜಿಲ್ಲೆಯ ಅಭಿವೃದ್ಧಿಗೆ ಅಪಾರ ಕೊಡುಗೆ ಸಲ್ಲಿಸಿದ್ದಾರೆ. ಸಭಾಪತಿಯಾಗಿ ಅವರ ಆಯ್ಕೆ ಜಿಲ್ಲೆಗೆ ದೊರೆತಿರುವ ಗೌರವ. ಅವರ ಅಯ್ಕೆಗೆ ಸಹಕರಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಂಸದ ಆಸ್ಕರ್ ಫೆರ್ನಾಂಡೀಸ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಚಿವ ಯು.ಟಿ. ಖಾದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story