ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆ ಬೆಂಬಲ: ಮಾಯಾವತಿ

ಹೊಸದಿಲ್ಲಿ, ಡಿ. 12: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸರಕಾರ ರಚನೆಗೆ ಕಾಂಗ್ರೆಸ್ ಗೆ ಬಿಎಸ್ಪಿ ಬೆಂಬಲ ಘೋಷಿಸಿದೆ.
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಬಿಎಸ್ಪಿ ನಾಯಕಿ ಮಾಯಾವತಿ ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಬಹುಮತ ಪಡೆಯಲು 2 ಸ್ಥಾನಗಳ ಕೊರತೆ ಇದೆ. ಬಿಎಸ್ ಪಿ ಬೆಂಬಲ ನೀಡಿದರೆ ಕಾಂಗ್ರೆಸ್ ಗೆ ಬಹುಮತದ ಕೊರತೆ ನಿವಾರಣೆಯಾಗಿದೆ. ಬಿಎಸ್ಪಿ ಎರಡು ಸ್ಥಾನಗಳಲ್ಲಿ ಜಯ ಗಳಿಸಿದೆ.
ಸಿಎಂ ಸ್ಥಾನಕ್ಕೆ ಶಿವರಾಜ್ ಸಿಂಗ್ ರಾಜೀನಾಮೆ
ಮಧ್ಯಪ್ರದೇಶದಲ್ಲಿ ಸಿಎಂ ಸ್ಥಾನಕ್ಕೆ ಶಿವರಾಜ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ರನ್ನು ಭೇಟಿಯಾಗಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
"ಈಗ ನಾನು ಸ್ವತಂತ್ರನಾಗಿದ್ದೇನೆ. ಮಧ್ಯಪ್ರದೇಶದಲ್ಲಿ ಸರಕಾರ ರಚನೆಗೆ ಬಿಜೆಪಿ ಹಕ್ಕು ಮಂಡಿಸುವುದಿಲ್ಲ " ಎಂದು ಶಿವರಾಜ್ ಸಿಂಗ್ ಹೇಳಿದ್ದಾರೆ.
Next Story