ಡಿ.16ರಂದು ಉಡುಪಿ ಜಿಲ್ಲಾ ಮಟ್ಟದ ಸಹಕಾರಿ ವೈಭವ
ಉಡುಪಿ, ಡಿ.12: ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಸಹಕಾರಿ ಕ್ಷೇತ್ರದ ಸಿಬ್ಬಂದಿ ಗಳಿಗೆ ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಪ್ರಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ‘ಸಹಕಾರ ವೈಭವ’ವನ್ನು ಡಿ.16ರಂದು ಬೆಳಗ್ಗೆ 9:30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಅಧ್ಯಕ್ಷ ಡಾ.ಎಂ.ಎನ್.ರಾೇಂದ್ರ ಕುಮಾರ್ ವಹಿಸಲಿರುವರು.
ಸ್ಪರ್ಧಾ ವಿಜೇತ ತಂಡಗಳಿಗೆ ಪ್ರಥಮ 25,000ರೂ., ದ್ವಿತೀಯ 15,000 ರೂ., ತೃತೀಯ 10,000ರೂ. ನಗದು ಬಹುಮಾನ, ಫಲಕ ಹಾಗೂ ಪ್ರಮಾಣ ನೀಡಲಾಗುವುದು. ಭಾಗವಹಿಸುವ ಪ್ರತಿ ತಂಡಗಳಿಗೂ 5000ರೂ. ನಗದು ಹಾಗೂ ಪ್ರಮಾಣ ಪತ್ರ ನೀಡಲಾಗುವುದು. ಸಂಜೆ ನಡೆಯುವ ಸಮಾ ರೋಪ ಸಮಾರಂಭದ ಅಧ್ಯಕ್ಷತೆಯನ್ನು ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ವಹಿಸಲಿರುವರು ಎಂದು ಸಂಘದ ಅಧ್ಯಕ್ಷ ಸಂಜೀವ ಕಾಂಚನ್ ಹಾಗೂ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.