ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮಂಗಳೂರು, ಡಿ.12: ರಾಜ್ಯ ಹಜ್ ಕಮಿಟಿಯ ಮೂಲಕ 2019ನೆ ಸಾಲಿನಲ್ಲಿ ಹಜ್ ಯಾತ್ರೆ ಕೈಗೊಳ್ಳಲು ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.19ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಡಿ.12 ಕೊನೆಯ ದಿನಾಂಕವಾಗಿತ್ತು.
ಈ ಮಧ್ಯೆ ಹಜ್ ಯಾತ್ರಿಕರು ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಬೇಕು ಎಂದು ಮನವಿ ಸಲ್ಲಿಸಿದ್ದರು. ಆ ಹಿನ್ನೆಲೆಯಲ್ಲಿ ಸಚಿವ ಝಮೀರ್ ಅಹ್ಮದ್ ಖಾನ್ ಅವರು ಡಿ.19ರವರೆಗೆ ಅವಧಿ ವಿಸ್ತರಿಸಿದ್ದಾರೆ ಎಂದು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಕಣಚೂರು ಮೋನು ತಿಳಿಸಿದ್ದಾರೆ.
Next Story