ಬಾಯ್ಲರ್ ಸ್ಫೋಟ: ಮೂವರು ಕಾರ್ಮಿಕರ ಸಾವು, ಇಬ್ಬರಿಗೆ ಗಾಯ
ದಾದ್ರಾ-ನಗರ್ಹವೇಲಿ, ಡಿ.13: ಇಲ್ಲಿನ ಸಿಲ್ವಸ್ಸಾದಲ್ಲಿನ ನರೋಲಿ ಗ್ರಾಮದಲ್ಲಿರುವ ಕೃಷ್ಣಾ ಸ್ಟೀಲ್ ಕಂಪೆನಿಯಲ್ಲಿ ಗುರುವಾರ ಬೆಳಗ್ಗೆ ಬಾಯ್ಲರ್ವೊಂದು ಸ್ಫೋಟಗೊಂಡ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದರೆ, 2ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಿಲ್ವಸ್ಸಾದ ವಿನೋಬಾ ಭಾವೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಯ್ಲರ್ ಸ್ಫೋಟಕ್ಕೆ ಕಾರಣವೇನೆಂದು ಇನ್ನಷ್ಟೇ ಗೊತ್ತಾಗಬೇಕಾಗಿದೆ. ಪೊಲೀಸರು ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದಾರೆ.
Next Story