ಉಡುಪಿ: 108 ಅಂಬ್ಯುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ

ಉಡುಪಿ, ಡಿ.13: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು ಆರೋಗ್ಯ ಕವಚ 108 ಅಂಬ್ಯುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಗುರುವಾರ ಬೆಳಗ್ಗೆ 10.50ರ ಸುಮಾರಿಗೆ ಉಡುಪಿಯಲ್ಲಿ ನಡೆದಿದೆ.
ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಣಿಪಾಲ ಈಶ್ವರನಗರದ ಆಶಾ ಎಂಬವರನ್ನು 108 ಆ್ಯಂಬುಲೆನ್ಸ್‌ನಲ್ಲಿ ಉಡುಪಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆ್ಯಂಬುಲೆನ್ಸ್ ಉಡುಪಿಗೆ ತಲುಪುತ್ತಿದ್ದಂತೆ ಆಶಾ ಅವರ ಹೆರಿಗೆ ನೋವು ತೀವ್ರಗೊಂಡಿತ್ತೆನ್ನಲಾಗಿದೆ. ಇದರಿಂದ ಆ್ಯಂಬುಲೆನ್ಸ್‌ನಲ್ಲಿದ್ದ ಇಎಂಟಿ ಕಾಶೀನಾಥ್ ಪೂಜಾರ ಮತ್ತು ಪೈಲಟ್ ಬಸವರಾಜ ಮೇಟಿ ಕೂಡಲೇ ಕಾರ್ಯಪ್ರವೃತ್ತರಾದರು. ಇವರಿಬ್ಬರ ಸಹಕಾರದಿಂದ ಆಶಾ ಅಂಬ್ಯುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದರು. ಈಗ ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ಆರೋಗ್ಯ ಕವಚ ಸಿಬ್ಬಂದಿ ತಿಳಿಸಿದ್ದಾರೆ.
Next Story