ಉಡುಪಿ: ದಸಂಸ ರಾಜ್ಯ ಸಮಿತಿಗೆ ಸುಂದರ್ ಮಾಸ್ಟರ್ ಆಯ್ಕೆ

ಉಡುಪಿ, ಡಿ.13: ಇತ್ತೀಚೆಗೆ ಬೆಂಗಳೂರಿನ ದೇವನ ಹಳ್ಳಿಯ ಅಂಬೇಡ್ಕರ್ ಭವನದಲ್ಲಿ ಜರಗಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿಯ ಸರ್ವ ಸದಸ್ಯರ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ದಸಂಸ ರಾಜ್ಯ ಸಮಿತಿ ಸದಸ್ಯರಾಗಿ ಸುಂದರ್ ಮಾಸ್ತರ್ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಭೆಯಲ್ಲಿ ರಾಜ್ಯ ಪ್ರದಾನ ಸಂಚಾಲಕ ಮಾವಳ್ಳಿ ಶಂಕರ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಹಾಗೂ 28 ಜಿಲ್ಲೆಗಳ ಪದಾಧಿಕಾರಿ ಗಳು ಭಾಗವಹಿಸಿದ್ದರು.
Next Story