ಮಾಧ್ಯಮ ತರಬೇತಿ: ಅರ್ಜಿ ಆಹ್ವಾನ
ಮಂಗಳೂರು, ಡಿ.13: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಂಗಳೂರು ಕಚೇರಿಯಲ್ಲಿ ಕರ್ನಾಟಕ ಮಾಧ್ಯಮ ಅಕಾಡಮಿಯ ಮೂಲಕ ಎಸ್‌ಸಿಪಿ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿಂದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಕನಾಟಕ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ/ಇಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪಡೆದಿರಬೇಕು. ಸ್ನಾತ್ತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.
ಅಭ್ಯರ್ಥಿಗಳು ಪಡೆದಿರುವ ಅಂಕಗಳ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ ಮಾಸಿಕ 15 ಸಾವಿರ ರೂ. ಗೌರವಧನ ನೀಡಲಾಗುವುದು. ಇಲಾಖೆಯ ಕ್ಷೇತ್ರಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಏಳು ತಿಂಗಳುಗಳ ಕಾಲ ಕಾರ್ಯನಿರ್ವಹಿಸಬೇಕಾಗುತ್ತದೆ.
ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಡಿ.21 ಕಡೆಯ ದಿನ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, 2ನೇ ಮಹಡಿ, ಪಿಡಬ್ಲ್ಯುಡಿ ಕಟ್ಟಡ, ನೆಹರೂ ಮೈದಾನ ಎದುರು, ಮಂಗಳೂರು (ದೂ.ಸಂ.: 0824- 2424254) ಇಲ್ಲಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಾರ್ತಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದರು.







