ಮರಕ್ಕೆ ಕಾರು ಢಿಕ್ಕಿ: ಚಾಲಕ ಮೃತ್ಯು

ಶಂಕರ್ ಶೆಟ್ಟಿ
ಕುಂದಾಪುರ, ಡಿ.13: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಕಾಳಾವರ ಗ್ರಾಮದ ಸಲ್ವಾಡಿ ನಡುಬೆಟ್ಟು ಕ್ರಾಸ್ ಬಳಿ ಡಿ.13ರಂದು ಬೆಳಗ್ಗೆ 9:30ರ ಸುಮಾರಿಗೆ ನಡೆದಿದೆ.
ಮೃತರನ್ನು ಮೆರ್ಡಿಯ ಶಂಕರ್ ಶೆಟ್ಟಿ (63) ಎಂದು ಗುರುತಿಸಲಾಗಿದೆ. ಇವರು ತನ್ನ ಸ್ಯಾಂಟ್ರೋ ಕಾರನ್ನು ಕಾಳಾವರದಿಂದ ಬಿದ್ಕಲ್ಕಟ್ಟೆ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದು, ಈ ವೇಳೆ ಎದುರಿನಿಂದ ಬರುತ್ತಿದ್ದ ಬೈಕ್ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ನಿಯಂತ್ರಣ ತಪ್ಪಿದ ಕಾರು, ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ತೀವ್ರವಾಗಿ ಗಾಯಗೊಂಡ ಶಂಕರ ಶೆಟ್ಟಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ವಿಜಯಾ ಬ್ಯಾಂಕಿನ ನಿವೃತ್ತ ಅಧಿಕಾರಿಯಾಗಿರುವ ಶಂಕರ್ ಶೆಟ್ಟಿ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಎುಲ್ಲಿ ಪ್ರಕರಣ ದಾಖಲಾಗಿದೆ.
Next Story