ಕಾರ್ಕಳ ಖಾಸಗಿ ಶಾಲೆಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಶಿಕ್ಷಕ ಸೆರೆ

ಕಾರ್ಕಳ, ಡಿ.13: ಕಾರ್ಕಳದ ಖಾಸಗಿ ಶಾಲೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನೊಬ್ಬನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಪೊಕ್ಸೋ ಕಾಯಿದೆಯಡಿ ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಬೆಳ್ತಂಗಡಿ ಮೂಲದ ಶಿಕ್ಷಕ ಪ್ರಸಾದ್ (28) ಬಂಧಿತ ಆರೋಪಿ.
ಈತ ಶಾಲೆಯ ಕೋಣೆಯೊಂದರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗುವ ವೀಡಿಯೊ ತುಣುಕು ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿತ್ತು.
ಈ ಕುರಿತು ಶಾಲಾ ಮುಖ್ಯಸ್ಥರು ಇಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪೊಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. ಅದರಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು,ಜಿಲ್ಲಾ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Next Story