Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೋಲರಿಯದ ಸರದಾರ, ದಿಲ್ಲಿ ದರ್ಬಾರ್ ನ...

ಸೋಲರಿಯದ ಸರದಾರ, ದಿಲ್ಲಿ ದರ್ಬಾರ್ ನ ನಾಯಕ ಈಗ ಮಧ್ಯಪ್ರದೇಶದ ಸಿಎಂ

9 ಬಾರಿ ಲೋಕಸಭಾ ಚುನಾವಣೆ ಗೆದ್ದ ಕಮಲ್ ನಾಥ್

ವಾರ್ತಾಭಾರತಿವಾರ್ತಾಭಾರತಿ13 Dec 2018 11:43 PM IST
share
ಸೋಲರಿಯದ ಸರದಾರ, ದಿಲ್ಲಿ ದರ್ಬಾರ್ ನ ನಾಯಕ ಈಗ ಮಧ್ಯಪ್ರದೇಶದ ಸಿಎಂ

ಮಧ್ಯಪ್ರದೇಶ, ಡಿ.13: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 114 ಸ್ಥಾನಗಳೊಂದಿಗೆ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಂತರ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ತೀವ್ರ ಕುತೂಹಲ ಕೆರಳಿಸಿದ್ದ ಸಿಎಂ ಆಯ್ಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಮಲ್ ನಾಥ್ ರಿಗೆ ಮಧ್ಯಪ್ರದೇಶ ಸಿಎಂ ಹುದ್ದೆಯನ್ನು ಅಲಂಕರಿಸುವ ಅವಕಾಶ ಮಾಡಿಕೊಟ್ಟಿದ್ದಾರೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಜನಿಸಿದ ಕಮಲ್ ನಾಥ್ ಕಲ್ಕತ್ತಾ ವಿವಿಯ ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದರು. ಲೋಕಸಭೆಯಲ್ಲಿ ಅತೀ ಹೆಚ್ಚಿನ ಕಾಲ ಸೇವೆ ಸಲ್ಲಿಸಿದ ಹಿರಿಯ ಸದಸ್ಯರಲ್ಲೊಬ್ಬರಾಗಿರುವ ಕಮಲ್ ನಾಥ್ ಮಧ್ಯಪ್ರದೇಶದ ಛಿಂದ್ವಾರ ಲೋಕಸಭಾ ಕ್ಷೇತ್ರದಿಂದ 9 ಬಾರಿ ಗೆದ್ದು ಇತಿಹಾಸ ನಿರ್ಮಿಸಿದವರು. ಮಧ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಕಮಲ್ ನಾಥ್ ನೆಹರೂ-ಗಾಂಧಿ ಕುಟುಂಬದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ. ಸಂಜಯ್ ಗಾಂಧಿಯವರೊಂದಿಗೆ ಅವರು ಡೂನ್ ಸ್ಕೂಲ್ ನಲ್ಲಿ ಸಹಪಾಠಿಯಾಗಿದ್ದರು.

ಕಮಲ್ ನಾಥ್ 1980, 1985, 1989, 1991, 1998, 1999, 2004, 2009, 2014ರಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು. 1991ರಲ್ಲಿ ಅವರು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾಗಿ, 1995ರಿಂದ 1996ರವರೆಗೆ ಕೇಂದ್ರ ಜವುಳಿ ಖಾತೆ ರಾಜ್ಯ ಸಚಿವರಾಗಿ, 2004ರಿಂದ 2009ರವರೆಗೆ ಕೇಂದ್ರ ವಾಣಿಜ್ಯ ಹಾಗು ಕೈಗಾರಿಕಾ ಸಚಿವರಾಗಿ, 2009ರಲ್ಲಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

2006ರಲ್ಲಿ ಜಬಲ್ಪುರ್ ರಾಣಿ ದುರ್ಗಾವತಿ ವಿವಿ ಕಮಲ್ ನಾಥ್ ರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. 1973 ಜನವರಿ 27ರಂದು ಅಲ್ಕಾ ನಾಥ್ ರನ್ನು ಕಮಲ್ ನಾಥ್ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಪುತ್ರರಿದ್ದಾರೆ.

ಸಿಖ್ ಹತ್ಯಾಕಾಂಡದ ಕಳಂಕ

1984ರಲ್ಲಿ ಇಂದಿರಾ ಗಾಂಧಿ ಹತ್ಯೆಯಾದ ಮರುದಿನ 4,000ಕ್ಕೂ ಅಧಿಕ ಜನರು ರಕಬ್ ಗಂಜ್ ಗುರುದ್ವಾರದ ಮೇಲೆ ನಡೆಸಿದ್ದು, ಇಬ್ಬರು ಸಿಕ್ಖರನ್ನು ಜೀವಂತ ದಹಿಸಲಾಗಿತ್ತು. ಈ ಸಂದರ್ಭ ಕಮಲ್ ನಾಥ್ ಅದೇ ಸ್ಥಳದಲ್ಲಿದ್ದರು ಎಂದು ಸಿಖ್ ಹತ್ಯಾಕಾಂಡದ ಕುರಿತು ಮನೋಜ್ ಮಿಟ್ಟಾ ಮತ್ತು ಎಚ್. ಎಸ್. ಫೂಲ್ಕಾ ಅವರು ಬರೆದ ‘ವೆನ್ ಎ ಟ್ರೀ ಶೂಕ್ ದಿಲ್ಲಿ’ ಎನ್ನುವ ಪುಸ್ತಕದಲ್ಲಿ ಆರೋಪಿಸಲಾಗಿದೆ.

ಗುರುದ್ವಾರಕ್ಕೆ ಗುಂಪು ಮುತ್ತಿಗೆ ಹಾಕಿದ ಸಂದರ್ಭ ಕಮಲ್ ನಾಥ್ ಅದೇ ಸ್ಥಳದಲ್ಲಿ 2 ಗಂಟೆಗಳಿಗೂ ಕಾಲ ಅಲ್ಲಿದ್ದರು ಎಂದು ಪುಸ್ತಕದಲ್ಲಿ ಆರೋಪಿಸಲಾಗಿದೆ. ಸ್ಥಳದಲ್ಲಿದ್ದರೂ ಸಿಕ್ಖ್ ವ್ಯಕ್ತಿಗಳನ್ನು ರಕ್ಷಿಸಲು ರಾಜಕೀಯ ನಾಯಕರಾಗಿ ಯಾವುದೇ ಪ್ರಯತ್ನ ಮಾಡಿಲ್ಲ ಎನ್ನುವ ಆರೋಪ ಕಮಲ್ ನಾಥ್ ರಾಜಕೀಯ ಜೀವನದಲ್ಲಿ ಕಪ್ಪುಚುಕ್ಕೆಯಾಗಿಯೇ ಉಳಿದಿದೆ.

ಹವಾಲಾ ಹಗರಣದ ದೋಷಾರೋಪ ಪಟ್ಟಿಯಲ್ಲಿ ಅವರ ಹೆಸರು ಸೇರಿದಾಗ 1996 ರಲ್ಲಿ ಅವರಿಗೆ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಲಾಯಿತು . ಆಗ ಅವರ ಪತ್ನಿ ಅಲ್ಕಾ ನಾಥ್ ಚಿಂದ್ವಾರದಿಂದ ಸ್ಪರ್ಧಿಸಿ ಗೆದ್ದಿದ್ದರು. ಮತ್ತೆ ಮುಂದಿನ ಚುನಾವಣೆಯಲ್ಲಿ ಕಮಲ್ ನಾಥ್ ಸ್ಪರ್ಧಿಸಿ ಗೆದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X