Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರಿ ಅನುದಾನಗಳ ಸಮರ್ಪಕ ಬಳಕೆಗೆ...

ಸರಕಾರಿ ಅನುದಾನಗಳ ಸಮರ್ಪಕ ಬಳಕೆಗೆ ಅಧಿಕಾರಿಗಳಿಂದ ನಿರ್ಲಕ್ಷ್ಯ: ಚಿಕ್ಕಮಗಳೂರು ಜಿಪಂ ಸದಸ್ಯ ಮಹೇಂದ್ರ

ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ13 Dec 2018 11:53 PM IST
share
ಸರಕಾರಿ ಅನುದಾನಗಳ ಸಮರ್ಪಕ ಬಳಕೆಗೆ ಅಧಿಕಾರಿಗಳಿಂದ ನಿರ್ಲಕ್ಷ್ಯ: ಚಿಕ್ಕಮಗಳೂರು ಜಿಪಂ ಸದಸ್ಯ ಮಹೇಂದ್ರ

ಚಿಕ್ಕಮಗಳೂರು, ಡಿ.13: ಚುನಾಯಿತ ಪ್ರತಿನಿಧಿಗಳು ಸಭೆಯಲ್ಲಿ ಹೇಳುವುದೇ ಒಂದು, ಮಾಡುವುದು ಇನ್ನೊಂದು. ಪ್ರತೀ ಸಭೆಗಳಲ್ಲೂ ಅಧಿಕಾರಿಗಳಿಗೆ ತಮ್ಮ ಜವಬ್ದಾರಿಗಳ ಬಗ್ಗೆ ಹೇಳುವುದೇ ಆಯಿತು, ಅಧಿಕಾರಿಗಳು ಕೇಳುವುದೇ ಆಯಿತು. ಇದು ಬಿಟ್ಟರೇ ಸರಕಾರದ ಬೇರೆ ಯಾವ ಕೆಲಸಗಳೂ ಪೂರ್ಣಗೊಂಡಿಲ್ಲ ಎಂದು ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಚ್.ಮಹೇಂದ್ರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಇಲಾಖೆಗೆ ಬರುವ ಅನುದಾನದ ಬಗ್ಗೆ ಚರ್ಚಿಸಿ ಸಮರ್ಪಕವಾಗಿ ನಿಗದಿತ ಸಮಯದಲ್ಲಿ ಯೋಜನೆಗಳ ಜಾರಿಯನ್ನು ಪೂರ್ಣಗೊಳಿಸಬೇಕೆಂದು ಈ ಹಿಂದಿನ ಸಭೆಯಲ್ಲಿ ಸೂಚಿಸಲಾಗಿದೆ. ಆದರೆ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಆರೋಪಿಸಿದ ಅವರು, ಕೃಷಿ ಅಧಿಕಾರಿಗಳು ಜಿಲ್ಲಾದ್ಯಂತ ಇರುವ ಗೊಬ್ಬರದ ಅಂಗಡಿಗಳಲ್ಲಿ ದರಪಟ್ಟಿಯ ನಾಮಫಲಕ ಹಾಕಿಲ್ಲ ಎಂಬ ದೂರುಗಳು ವ್ಯಾಪಕವಾಗಿ ಕೇಳಿ ಬಂದಿವೆ. ಅಧಿಕಾರಿಗಳು ತಕ್ಷಣವೆ ಗೊಬ್ಬರದ ಅಂಗಡಿಗಳಿಗೆ ಭೇಟಿ ನೀಡಿ ನಾಮಫಲಕ ಮತ್ತು ಲೆಕ್ಕಪತ್ರಗಳನ್ನು ಸರಿಯಾಗಿ ನೀಡದಿರುವ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಬೇಕೆಂದು ಸೂಚಿಸಿದರು.

ರೈತರಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯವರು ಹೆಚ್ಚಿನ ಮಾಹಿತಿ ನೀಡುವುದರ ಜೊತೆಗೆ ಸರಕಾರದಿಂದ ಬರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಿ ನೀಡಬೇಕು. ಸಾವಯವ ಗೊಬ್ಬರ ಬಳಸಿ ಬೆಳೆದಿರುವ ರೈತರನ್ನು ಪ್ರೋತ್ಸಾಯಿಸಿ ಉತ್ತಮ ಮಾರ್ಗದರ್ಶನ ನೀಡಬೇಕೆಂದು ತಿಳಿಸಿದ ಅವರು, ಅಡಕೆ ಸುಲಿಯುವ ಯಂತ್ರಗಳಿಗೆ ಸರಕಾರ ಸಬ್ಸಿಡಿ ನೀಡುತ್ತಿದ್ದರೂ ಕಡೂರು, ತರೀಕೆರೆ, ಮೂಡಿಗೆರೆ ಭಾಗದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಬೆಳೆಗಾರರಿಗೆ ಸಬ್ಸಿಡಿ ಸೌಲಭ್ಯಗಳ ಬಗ್ಗೆ ಸರಿಯಾದ ಮಾಹಿತಿ ನೀಡಿಲ್ಲ. ಎಲ್ಲಾ ಗ್ರಾಮ ಸಭೆಗಳಲ್ಲೂ ಅಧಿಕಾರಿಗಳು ಭಾಗವಹಿಸಿ ಇಲಾಖೆಯ ಸೌಲಭ್ಯಗಳ ಬಗ್ಗೆ ರೈತರಿಗೆ ಹೆಚ್ಚು ಮಾಹಿತಿ ನೀಡಬೇಕೆಂದು ತಿಳಿಸಿದರು.

ಗಂಗಾ ಕಲ್ಯಾಣ ಯೋಜನೆಯಡಿ ಗುಣಮಟ್ಟದ ಪೈಪ್ ಮತ್ತು ಮೋಟಾರನ್ನು ವಿತರಿಸುತ್ತಿಲ್ಲ ಎಂದು ಆರೋಪಗಳು ಕೇಳಿಬಂದಿವೆ. ಅಧಿಕಾರಿಗಳು ಗುಣಮಟ್ಟ ಪರೀಕ್ಷಿಸಿ ರೈತರಿಗೆ ಯೋಜನೆಯ ಸಲಕರಣೆಗಳನ್ನು ವಿತರಿಸಬೇಕೆಂದರು.

ಜಿಪಂ ಸದಸ್ಯ ಬೆಳವಾಡಿ ರವೀಂದ್ರ ಮಾತನಾಡಿ, ಕೈಗಾರಿಕೆ ಇಲಾಖೆಯಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ತರಬೇತಿ ನೀಡಿದ್ದರೂ ಬ್ಯಾಂಕಿನಲ್ಲಿ ಸಾಲ ಸರಿಯಾಗಿ ವಿತರಿಸುತ್ತಿಲ್ಲ. ಲಕ್ಯಾ ಹೋಬಳಿ ತೀವ್ರ ಬರಕ್ಕೆ ತುತ್ತಾಗಿದೆ. ಜನರು, ಜಾನುವಾರುಗಳು ನೀರಿಲ್ಲದೇ ತತ್ತರಿಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬರಗಾಲ ಪ್ರದೇಶವೆಂದು ಬರ ಕುರಿತ ಸಮಗ್ರ ಮಾಹಿತಿಯನ್ನು ಸರಕಾರಕ್ಕೆ ವರದಿ ಸಲ್ಲಿಸಬೇಕು. ಸರಕಾರ ಬಿಡುಗಡೆ ಮಾಡುವ ವಿಶೇಷ ಅನುದಾನ ಬಳಸಿ ಲಕ್ಯಾ ಹೋಬಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಮತ್ತು ನೀರನ್ನು ವಿತರಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಚುನಾವಣೆಗಳು ಸಮೀಪಿಸುತ್ತಿದ್ದು, ತಕ್ಷಣ ಅಧಿಕಾರಿಗಳು ಸರಕಾರದ ಅನುದಾನದಡಿ ಕೈಗೊಂಡಿರುವ ಕಾಮಗಾರಿಗಳನ್ನು ಜನವರಿ ತಿಂಗಳೊಳಗೆ ಪೂರ್ಣಗೊಳಿಸಬೇಕೆಂದು ಜಿಪಂ ಸದಸ್ಯ ಮಹೇಶ್ ಒಡೆಯರ್ ತಿಳಿಸದರೆ, ಕೃಷಿ ಇಲಾಖೆಯಿಂದ ಮಾಡುತ್ತಿರುವ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ತೋಟಗಾರಿಕೆ ಇಲಾಖೆ, ಪಶುಪಾಲನೆ ಇಲಾಖೆ ವತಿಯಿಂದ ಹೆಚ್ಚಿನ ಮಳಿಗೆ ಹಾಕುವುದರ ಜೊತೆಗೆ ಅಧಿಕಾರಿಗಳು ರೈತರಿಗೆ ಹೆಚ್ಚಿನ ಮಾಹಿತಿ ನೀಡಬೇಕೆಂದು ಜಿಪಂ ಸದಸ್ಯ ಪ್ರಭಾಕರ್ ಸಭೆಯ ಗಮನಸೆಳೆದರು.

ಸಭೆಯಲ್ಲಿ ಜಿಪಂ ಸದಸ್ಯರಾದ ಪ್ರೇಮಾ, ಕೆ.ವಿ.ಮಂಜುನಾಥ್, ಸುಧಾ ಯೋಗೀಶ್, ಜಿಪಂ ಉಪಕಾರ್ಯದರ್ಶಿ ರಾಜಗೋಪಾಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X