ಬ್ರಹ್ಮಾವರ: ಡಿ.15ರಂದು ಸಾಧಕ ರೈತರಿಗೆ ವಿಕ ಪುರಸ್ಕಾರ
ಉಡುಪಿ, ಡಿ.14: ಕೃಷಿ ಮತ್ತು ಮೀನುಗಾರಿಕಾ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿದ ಅನ್ನದಾತರನ್ನು ರಾಜ್ಯದಾದ್ಯಂತ ಗುರುತಿಸಿ ಗೌರವಿಸುವ ವಿಕ ಸೂಪರ್ ಸ್ಟಾರ್ ರೈತ ಕಾರ್ಯಕ್ರಮ ಜಿಲ್ಲೆಯ ಬ್ರಹ್ಮಾವರ ಬಂಟರ ಭವನದಲ್ಲಿ ಡಿ.15ರಂದು ಬೆಳಗ್ಗೆ 10:30ಕ್ಕೆ ನಡೆಯಲಿದೆ.
ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಡಾ. ಜಯಮಾಲಾ ಕಾರ್ಯಕ್ರಮ ಉದ್ಘಾಟಿಸುವರು. ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ.ಶಂಕರ್ ಉಪಸ್ಥಿತರಿರುವರು.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಎಸ್. ಯು. ಪಾಟೀಲ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲೂಕು ಯೋಜನಾಧಿಕಾರಿ ರೋಹಿತ್ ಎಚ್., ಬ್ರಹ್ಮಾವರ ಬಂಟರ ಭವನ ಸಂಚಾಲಕ ಸುದರ್ಶನ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದಾರೆ.
ಕೃಷಿ ಕ್ಷೇತ್ರದ ಐವರು ಸಾಧಕರು ಹಾಗೂ ಮೀನುಗಾರಿಕಾ ಕ್ಷೇತ್ರದ ಐವರು ಸಾಧಕರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.