ಡಿಎಸ್‌ಟಿ-ಪಿಎಚ್‌ಡಿ ಶಿಷ್ಯವೇತನ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಉಡುಪಿ, ಡಿ.14: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿಎಸ್‌ಟಿ) 2018-19ನೇ ಸಾಲಿನ ವಿಜ್ಞಾನ ಮತ್ತು ಇಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಸಂಶೋಧನೆಗೆ ಡಿ.ಎಸ್.ಟಿ ಶಿಷ್ಯವೇತನ ಎಂಬ ನೂತನ ಕಾರ್ಯಕ್ರಮಕ್ಕೆ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯ ಗಳಲ್ಲಿ, ಕರ್ನಾಟಕದ ಮಾನ್ಯತೆ ಪಡೆದ ವಿವಿ/ಸಂಸ್ಥೆ/ ಕಾಲೇಜುಗಳಲ್ಲಿ ಪಿಎಚ್‌ಡಿ ಪದವಿಗೆ ನೊಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ನೀಡಲಾಗುವ ಶಿಷ್ಯವೇತನದ ಮೊತ್ತವನ್ನು ಮಾಸಿಕ 3000 ರೂ.ಗಳಿಂದ 20,000 ರೂ.ಗಳಿಗೆ ಪರಿಷ್ಕೃರಿಸಲಾಗಿರುವುದರಿಂದ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.15ರವರೆಗೆ ವಿಸ್ತರಿಸಲಾಗಿದೆ. ಹಿಂದಿನ ಆಹ್ವಾನಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್- http://ksteps.karnataka.gov.in- ಅನ್ನು ಸಂಪರ್ಕಿಸುವಂತೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.