ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ, ಡಿ.13: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಡುಪಿ ಕಚೇರಿಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮೂಲಕ ಎಸ್‌ಸಿಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿಂದ 7 ತಿಂಗಳ ಕಾಲದ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿ ಕರ್ನಾಟಕ ರಾಜ್ಯದ ಮಾನ್ಯತೆ ಪಡೆದ ವಿವಿಗಳಿಂದ ಪತ್ರಿಕೋದ್ಯಮ/ಇಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ತರಬೇತಿಗೆ ಪ.ಜಾತಿ ಮತ್ತು ಪ.ಪಂಗಡದ ತಲಾ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿ ಗಳು ಲಭ್ಯವಿಲ್ಲದಿದ್ದಲ್ಲಿ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು ಪಡೆದಿರುವ ಅಂಕಗಳ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.
ಆಯ್ಕೆಯಾದವರಿಗೆ ಮಾಸಿಕ ರೂ. 15 ಸಾವಿರ ಶಿಷ್ಯ ವೇತನವನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಮೂಲಕ ನೀಡಲಾಗುವುದು. ಅರ್ಜಿ ಸಲ್ಲಿಸಲು ಡಿ.21 ಕಡೆಯ ದಿನವಾಗಿದ್ದು, ನಿಗದಿತ ನಮೂನೆ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ನಾಯರ್ ಕೆರೆ, ಬ್ರಹ್ಮಗಿರಿ (ಮೊ.9480841232) ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಾರ್ತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.