ಉಡುಪಿ: ಜಿಲ್ಲಾ ಬಾಲಭವನದಲ್ಲಿ ವಾರಾಂತ್ಯ ಕಾರ್ಯಕ್ರಮ
ಉಡುಪಿ, ಡಿ.14: ಬನ್ನಂಜೆಯಲ್ಲಿರುವ ಜಿಲ್ಲಾ ಬಾಲಭವನದಲ್ಲಿ ಡಿ.15 ರಿಂದ ಪ್ರತೀ ಶನಿವಾರ ಸಂಜೆ ಮತ್ತು ರವಿವಾರ ಬೆಳಗ್ಗೆ ಮತ್ತು ಸಂಜೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ ಮಕ್ಕಳಿಗೆ ಚಿತ್ರಕಲೆ, ಕರಕುಶಲ, ರಂಗಚಟುವಟಿಕೆ, ಸಮೂಹ ನೃತ್ಯ, ಸಂಗೀತ, ಯೋಗ ಚಟುವಟಿಕೆಗಳನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ, ಸೌಲ್ಯ ವಂಚಿತ ಹಾಗೂ ಸರಕಾರಿ ಶಾಲಾ ಮಕ್ಕಳಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, 6ರಿಂದ 16 ವರ್ಷದೊಳಗಿನ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸ ಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820-2574978ನ್ನು ಸಂಪರ್ಕಿ ಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story