ದೇವರಾಜ ಅರಸು ನಿಗಮ: ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ
ಉಡುಪಿ, ಡಿ.14: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2018-19ನೇ ಸಾಲಿಗೆ ಹಿಂದುಳಿದ ವರ್ಗಗಳ ನಿರುದ್ಯೋಗಿ ಪದವೀಧರರಿಗೆ ಸ್ವಯಂ ಉದ್ಯೋಗ ಸಾಲ ಸೌಲಭ್ಯವನ್ನು ವಾರ್ಷಿಕ ಶೇ.6ರ ಬಡ್ಡಿದರದಲ್ಲಿ ಗರಿಷ್ಠ 10ಲಕ್ಷ ರೂ.ವರೆಗೆ ಸಾಲ ಒದಗಿಸಲಾಗುತಿದ್ದು, ಇದರ ಸೌಲಭ್ಯ ಪಡೆಯಲಿಚ್ಛಿಸುವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸೌಲಭ್ಯ ಪಡೆಯಲು ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 40,000ರೂ. ಹಾಗೂ ಪಟ್ಟಣ ಪ್ರದೇಶದವರಿಗೆ 55,000 ರೂ. ಒಳಗಿರಬೇಕು. ಅರ್ಜಿದಾರರು ಅಂಗೀಕೃತ ವಿಶ್ವವಿದ್ಯಾಲಯದ ಪದವೀಧರರಾಗಿದ್ದು, ನಿರುದ್ಯೋಗಿಗಳಾಗಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 25ರಿಂದ ಗರಿಷ್ಠ 40 ವರ್ಷದ ಮಿತಿಯಲ್ಲಿರಬೇಕು.
ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಅ್ಯರ್ಥಿಗಳು ಉಡುಪಿ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕಿನ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿ ಅಥವಾ ನಿಗಮದ ವೆಬ್ ಸೈಟ್- www.karnataka.gov.in/dbcdc - ಇಲ್ಲಿ ಅರ್ಜಿಗಳನ್ನು ಉಚಿತವಾಗಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲೆ ಗಳೊಂದಿಗೆ ಡಿ.29ರ ಒಳಗೆ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ ಜಿಲ್ಲಾಧಿಕಾರಿಗಳ ಸಂಕೀರ್ಣ, ಮಣಿಪಾಲ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‌ಸೈಟ್: www.karnataka.gov.in/dbcdc ಅಥವಾ ದೂರವಾಣಿ ಸಂಖ್ಯೆ:0820-2574882ನ್ನು ಸಂಪರ್ಕಿಸುವಂತೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







