ಮೀನಕಳಿಯ: ಶಾರ್ಟ್ ಸರ್ಕ್ಯೂಟ್ನಿಂದ ಮನೆ ಭಸ್ಮ

ಮಂಗಳೂರು, ಡಿ.15: ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಆನಾಹುತದಲ್ಲಿ ಮನೆಯೊಂದು ಸಂಪೂರ್ಣ ಭಸ್ಮವಾದ ಘಟನೆ ಬೈಕಂಪಾಡಿ ಸಮೀಪದ ಮೀನಕಳಿಯ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಇಲ್ಲಿನ ನಿವಾಸಿ ಕೇಶವ ಮೂಲ್ಯ ಎಂಬವರಿಗೆ ಸೇರಿದ ಮನೆ ಇದಾಗಿದೆ. ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಅವಘಡ ಸಂಭವಿಸಿದೆ. ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಕದ್ರಿ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು. ಆದರೆ ಅಷ್ಟರಲ್ಲಿ ಇಡೀ ಮನೆಯನ್ನು ಆವರಿಸಿದ್ದ ಬೆಂಕಿಗೆ ಮನೆಯಲ್ಲಿದ್ದ ಬಹುತೇಕ ಸೊತ್ತುಗಳೆಲ್ಲ ಸುಟ್ಟು ಭಸ್ಮವಾಗಿವೆ. ಮನೆಯ ಛಾವಣಿ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಉರಿದಿದೆ.
ಇದರಿಂದ ಅಪಾರ ನಷ್ಟ ಉಂಟಾಗಿದೆ.
Next Story