ಉಡುಪಿ: ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಗೆ ಅಭಿನಂದನೆ

ಉಡುಪಿ, ಡಿ.15: ವಿಧಾನ ಪರಿಷತ್‌ನ ನೂತನ ಸಭಾಪತಿಯಾಗಿ ಆಯ್ಕೆ ಯಾಗಿರುವ ಕೆ.ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಕಾಂಗ್ರೆಸ್ ನಿಯೋಗ ಶುಕ್ರವಾರ ಬೆಳಗಾವಿಯಲ್ಲಿ ಅಭಿನಂದನೆ ಸಲ್ಲಿಸಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಪಾಂಗಾಳ ಹರೀಶ್ ಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಹಬೀಬ್ ಅಲಿ, ಮಾಜಿ ನಗರಸಭಾ ಸದಸ್ಯ ನಾರಾಯಣ್ ಕುಂದರ್, ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಮತ್ತು ಕಾಂಗ್ರೆಸ್ ಮುಂದಾಳು ಗಣೇಶ್ ದೊಡ್ಡಣಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.
Next Story