ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ, ಮುಖಂಡರ ಸಮಾವೇಶ

ವಿಟ್ಲ, ಡಿ. 15: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಹಾಗೂ ಮುಖಂಡರ ಸಮಾವೇಶವು ಗುರುವಾರ ಮೆಲ್ಕಾರ್ ಬಿರ್ವ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ ಕೇಂದ್ರ ಸರಕಾರದ ಆಡಳಿತ ವೈಖರಿಯಿಂದ ಬೇಸತ್ತ ರಾಷ್ಟ್ರದ ಜನತೆ ಬಿಜೆಪಿ ಮುಕ್ತ ಭಾರತ ಮಾಡಲು ಮುಂದಡಿ ಇಟ್ಟಿದ್ದಾರೆ ಎಂದರು.
ಪಕ್ಷ ಪ್ರಮುಖರಾದ ಮಮತಾ ಡಿ.ಎಸ್. ಗಟ್ಟಿ, ಎಂ.ಎಸ್. ಮಹಮ್ಮದ್, ಕೆ. ಪದ್ಮನಾಭ ರೈ, ಮುಹಮ್ಮದ್ ರವೂಫ್, ಮಂಜುಳಾ ಮಾವೆ ಬಿ.ಎಂ.ಅಬ್ಬಾಸ್ ಅಲಿ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಹೈಡಾ ಸುರೇಶ್, ಹಾಜಿ ಎ. ಉಸ್ಮಾನ್ ಕರೋಪಾಡಿ, ಸಂಜೀವ ಪೂಜಾರಿ, ವಿನಾಯಕ, ಹೊನ್ನಯ್ಯ, ಪ್ರಶಾಂತ ಕುಲಾಲ್, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ. ಪದ್ಮಶೇಖರ ಜೈನ್, ಬೇಬಿ ಕುಂದರ್, ಈಶ್ವರ ಪೂಜಾರಿ ಕಡೇಶಿವಾಲಯ ಮೊದಲಾದವರು ಬಾಗವಹಿಸಿದ್ದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ, ಕಾರ್ಯಕ್ರಮ ನಿರೂಪಿಸಿದರು.
Next Story