Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ: ಕುಮಾರಧಾರ ನದಿಗೆ ಮುಳುಗು ಸೇತುವೆ;...

ಕಡಬ: ಕುಮಾರಧಾರ ನದಿಗೆ ಮುಳುಗು ಸೇತುವೆ; ಸಂಚಾರಕ್ಕೆ ಮುಕ್ತ

ವಾರ್ತಾಭಾರತಿವಾರ್ತಾಭಾರತಿ16 Dec 2018 1:09 PM IST
share
ಕಡಬ: ಕುಮಾರಧಾರ ನದಿಗೆ ಮುಳುಗು ಸೇತುವೆ; ಸಂಚಾರಕ್ಕೆ ಮುಕ್ತ

ಕಡಬ, ಡಿ.16: ಎಡಮಂಗಲದಿಂದ ತಾಲೂಕು ಕೇಂದ್ರ ಕಡಬವನ್ನು ಪಿಜಕ್ಕಳ ಮೂಲಕ ಸಂಪರ್ಕಿಸುವ  ಕುಮಾರಧಾರ ನದಿಗೆ ಪಾಲೋಳಿ ಬಳಿ ಊರವರೇ ಶ್ರಮದಾನದ ಮೂಲಕ ನಿರ್ಮಿಸಿರುವ ಮುಳುಗು ಸೇತುವೆಯು ಶನಿವಾರ ರಾತ್ರಿಯಿಂದ ಸಂಚಾರಕ್ಕೆ ಮುಕ್ತವಾಗಿದೆ.

5 ವರ್ಷಗಳ ಹಿಂದೆ ಸಾರ್ವಜನಿಕರು ಸೇರಿಕೊಂಡು ಬೃಹತ್ ಗಾತ್ರದ ಮೋರಿಗಳನ್ನು ಬಳಸಿ ರಚನೆಗೊಂಡ ಸದ್ರಿ ಮುಳುಗು ಸೇತುವೆಯು ಬೇಸಿಗೆ ಕಾಲದಲ್ಲಿ ಎಡಮಂಗಲದಿಂದ ಪಿಜಕ್ಕಳ ಮೂಲಕ ಕಡಬಕ್ಕೆ ಸಂಚಾರದ ಕೊಂಡಿಯಾಗಿದೆ. ಪ್ರತಿ ವರ್ಷ ಮಳೆಗಾಲ ಕಳೆದ ಕೂಡಲೇ ಈ ಸೇತುವೆಯನ್ನು ಸಾರ್ವಜನಿಕರೇ ಧನ ಸಂಗ್ರಹಿಸಿ ದುರಸ್ತಿಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಕಡಬದಿಂದ ಕೋಡಿಂಬಾಳ - ಪುಳಿಕುಕ್ಕು ಮೂಲಕ ಎಡಮಂಗಲವನ್ನು ತಲುಪಲು 12 ಕಿ.ಮೀ. ಸಂಚರಿಸಬೇಕಾಗಿದ್ದು, ಇದಕ್ಕೆ ಪ್ರತಿಯಾಗಿ ಪಿಜಕ್ಕಳ ಮೂಲಕ ಸಂಚರಿಸಿದ್ದಲ್ಲಿ ಕೇವಲ 5 ಕಿ.ಮೀ. ದೂರದಲ್ಲಿ ಎಡಮಂಗಲವನ್ನು ಸಂಪರ್ಕಿಸಬಹುದಾಗಿದೆ.

ಈ ವರ್ಷ ಹೊಸದಾಗಿ ರಚನೆಗೊಂಡಿರುವ ಸಾಮಾಜಿಕ ಸಂಘಟನೆ 'ಕೇಸರಿ ಯುವಕ ಮಂಡಲ ಎಡಮಂಗಲ' ಸೇತುವೆಯ ದುರಸ್ತಿ ಕಾರ್ಯದ ಹೊಣೆಯನ್ನು ಹೊತ್ತು ಸುಮಾರು60000  ರೂ. ಧನ ಸಂಗ್ರಹಿಸಿ ಪಾಲೋಳಿ ಶಾಶ್ವತ ಸೇತುವೆ ಹೋರಾಟ ಸಮಿತಿಯ ಮೇಲುಸ್ತುವಾರಿ ಹಾಗೂ ಮಾರ್ಗದರ್ಶನದಲ್ಲಿ ಐದು ದಿನಗಳ ನಿರಂತರ ದುರಸ್ತಿ ಕಾರ್ಯ ನಡೆಸಿ ಸಂಚಾರಕ್ಕೆ ಮುಕ್ತವಾಗಿಸಿದ್ದಾರೆ. ಕೇಸರಿ ಯುವಕ ಮಂಡಲದ ಈ ಸಮಾಜಮುಖಿ ಕೆಲಸವು ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಗಿದೆ. ಪಾಲೋಳಿ ಶಾಶ್ವತ ಸೇತುವೆ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀ ಸಾಂತಪ್ಪ ಗೌಡ ಪಿಜಕಳ ನೂತನ ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿದರು.

ಕೇಸರಿ ಯುವಕ ಮಂಡಲದ ಅಧ್ಯಕ್ಷ ಚೇತನ್ ಡಿ.ಎ. ಹಾಗೂ ದುರಸ್ತಿ ಕೆಲಸಕ್ಕೆ ಸಂಪೂರ್ಣ ಮೇಲುಸ್ತುವಾರಿ ವಹಿಸಿದ ಪಾಲೋಳಿ ಶಾಶ್ವತ ಸೇತುವೆ ಹೋರಾಟ ಸಮಿತಿಯ ಉಪಾಧ್ಯಕ್ಷ ಜೋಸ್ ಕೇಂಜೂರು ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ಎಡಮಂಗಲ ಪಂಚಾಯತ್ ಅಧ್ಯಕ್ಷರಾದ ಸುಂದರ ಗೌಡ ದೋಳ್ತಿಲ, ಪಾಲೋಳಿ ಶಾಶ್ವತ ಸೇತುವೆ ಹೋರಾಟ ಸಮಿತಿ ಗೌರವಾಧ್ಯಕ್ಷ ಚಂದ್ರಶೇಖರ ಗೌಡ ಮರಕ್ಕಡ, ಕಾರ್ಯದರ್ಶಿ ಶ್ಯಾಮ್ ತೋಮಸ್, ಕೋಶಾಧಿಕಾರಿ ರವೀಂದ್ರ ನೂಚಿಲ, ಕೇಸರಿ ಯುವಕ ಮಂಡಲದ ಉಪಾಧ್ಯಕ್ಷ ದಿನೇಶ್ ಮರೋಳಿ, ಕಾರ್ಯದರ್ಶಿ ಶರತ್ ಪಟ್ಲದಮೂಲೆ, ಕೋಶಾಧಿಕಾರಿ ಭರತ್ ಮಜ್ಜಾರು, ಪಿಜಕ್ಕಳ ಕುಮಾರಧಾರ ಯುವಕ ಮಂಡಲದ ಅಧ್ಯಕ್ಷ ಯತೀಂದ್ರ ಗೌಡ ಗೊಡಾಲ್, ಕಾರ್ಯದರ್ಶಿ ಪ್ರಭಾಕರ ಕೆ.ಎಸ್. ಪ್ರಮುಖರಾದ ಜಯರಾಮ ಗೌಡ, ಪೂವಪ್ಪಗೌಡ, ಸಚಿನ್ ಪಿ.ಎಸ್., ಸುಂದರ ಗೌಡ ಪಾಲೋಳಿ, ರಾಮಣ್ಣ ಗೌಡ ಪಿಜಕಳ, ಅನೀಶ್ ಕೇಂಜೂರು, ಜ್ಯೋತಿಶ್ ಕೇಂಜೂರು, ಯೋಗಿಶ್ ಭಟ್ ಕೇಂಜೂರು, ಇಸ್ಮಾಯಿಲ್ ಗಂಡಿತಡ್ಕ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X