ಕೊಲ್ಲೂರು ದೇವಳಕ್ಕೆ ಚಿತ್ರನಟ ಯಶ್ ಭೇಟಿ

ಬೈಂದೂರು, ಡಿ.16: ಬಹುನಿರೀಕ್ಷಿತ ಕೆಜಿಎಫ್ ಸಿನೆಮಾ ಬಿಡುಗಡೆ ಹಿನ್ನೆಲೆಯಲ್ಲಿ ಚಿತ್ರನಟ ಯಶ್ ಚಿತ್ರತಂಡ ಜೊತೆ ರವಿವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕೊಲ್ಲೂರಿಗೆ ಆಗಮಿಸಿದ ಅವರು, ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇವರೊಂದಿಗೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರ್ ಹಾಗೂ ಸ್ನೇಹಿತರಿದ್ದರು. ಇದೇ ವೇಳೆ ದೇವಸ್ಥಾನ ಆಡಳಿತ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ಯಶ್ ಅವರನ್ನು ಶಾಲು ಹೊಂದಿಸಿ ಗೌವಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಎಚ್. ಹಾಲಪ್ಪ, ಸಹಾಯ ಕಾರ್ಯನಿರ್ವಾಹಣಾಧಿಕಾರಿ ಕೃಷ್ಣಮೂರ್ತಿ, ವ್ಯವಸ್ಥಾಪನ ಸಮಿತಿಯ ಸದಸ್ಯ ರಮೇಶ್ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ಅಭಿಲಾಷ್ ವಿ.ಪಿ. ರಾಜೇಶ್ ಕಾರಂತ್, ನರಸಿಂಹ ಹಳಗೇರಿ ಮೊದಲಾ ದವರು ಉಪಸ್ಥಿತರಿದ್ದರು. ಅವರು ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೂ ಭೇಟಿ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ.