ಕನಕದಾಸರ ವೈಚಾರಿಕ ಚಿಂತನೆ ಇಂದಿಗೂ ಪ್ರಸ್ತುತ: ಡಾ. ನಿಕೇತನ

ಉಡುಪಿ, ಡಿ.16: ಇಂದು ದೇಶದಲ್ಲಿ ಆಹಾರ, ಬಣ್ಣದ ಹೆಸರಿನಲ್ಲಿ ಅಮಾ ಯಕರನ್ನು ಹೊಡೆದು ಸಾಯಿಸುವವರು ಕನಕದಾಸರ ಚಿಂತನೆಗಳನ್ನು ಅರ್ಥೈಸಿ ಕೊಂಡರೆ ಜಾತಿಮತ ಬೇಧಗಳ ಗೋಡೆಯನ್ನು ಮೀರಿ ಬದುಕಲು ಸಾಧ್ಯವಾಗು ತ್ತದೆ ಎಂದು ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಹಾಗೂ ಜಾನಪದ ತಜ್ಞೆ ಡಾ.ನಿಕೇತನ ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ರವಿವಾರ ಉಡುಪಿ ಬೋರ್ಡ್ ಹೈಸ್ಕೂಲ್ ಸಭಾಂಗಣದಲ್ಲಿ ಆಯೋಜಿಸಲಾದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ಇಂದಿನ ಯುವ ಜನಾಂಗದ ಹಲವು ಸಮಸ್ಯೆಗಳಿಗೆ ಕನಕದಾಸರ ಚಿಂತನೆ ಗಳು ಪರಿಹಾರ ನೀಡುತ್ತವೆ. ಯುವ ಜನಾಂಗದಲ್ಲಿ ಪ್ರಶ್ನಿಸುವ ಮನೋಭಾವ, ವೈಚಾರಿಕ ಚಿಂತನೆ ಮತ್ತು ಅವರಲ್ಲಿನ ಅಹಂ ನಿರಸನ ಮಾಡುವಲ್ಲಿ ಕನಕದಾಸರ ಕೀರ್ತನೆಗಳು ಇಂದಿಗೂ ಪ್ರಸ್ತುತ ಎಂದು ಅವರು ತಿಳಿಸಿದರು.
ತಲ್ಲಣಿಸದಿರು ಕಾಣು ಮನವೆ ಎಂಬ ಕೀರ್ತನೆಯು ಕ್ಷುಲ್ಲಕ ಕಾರಣಗಳಿಂದ ಅಪಾಯಕಾರಿ ನಿರ್ಧಾರಕೈಗೊಳ್ಳುವ ಯುವ ಜನಾಂಗಕ್ಕೆ ದಾರಿದೀಪವಾಗ ಬೇಕು. ಸಮಾಜದಲ್ಲಿ ಜಾತಿ ಪದ್ದತಿ ನಿರ್ಮೂಲನೆ, ಬಡವ ಶ್ರೀಮಂತ ಎಂಬ ಅಂತರಗಳನ್ನು ನಿರಸನಗೊಳಿಸಿ ಸಾಮರಸ್ಯದ ಬದುಕು ಸಾಗಿಸಲು ಕನಕದಾಸರ ಸಾಹಿತ್ಯ ತಿಳಿಯಬೇಕು. ಇವರ ಕೀರ್ತನೆಗಳು ಸಮಾಜದಲ್ಲಿ ಮಾನವೀಯತೆ ಹಾಗೂ ಶಾಂತಿ ನೆಲೆಸಲು ಸಹಕಾರಿಯಾಗಲಿವೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ನೀಡಿರುವ ಸಂದೇಶಗಳು ಇಡೀ ಮನುಕುಲಕ್ಕೆ ಸರ್ವಕಾಲಕ್ಕೂ ಮಾರ್ಗದರ್ಶಕವಾಗಿವೆ. ಕನಕದಾಸರು ಕವಿ, ದಾರ್ಶನಿಕ ಸಂತರಾಗಿದ್ದು ಅವರು ತಮ್ಮ ಕೀರ್ತನೆಗಳ ಮೂಲಕ ಜಾತಿ ಮತ ಬೇಧವಿಲ್ಲದೆ ಮನುಜ ಕುಲವೆಲ್ಲಾ ಒಂದೇ ಎಂಬ ಸಂದೇಶ ನೀಡಿದ್ದಾರೆ ಎಂದರು.
ಅವರ ರಚನೆಯ ಎಲ್ಲಾ ಕೀರ್ತನೆಗಳು ಮನುಕುಲಕ್ಕೆ ಸದಾ ಕಾಲ ಮಾರ್ಗ ದರ್ಶನ ನೀಡಲಿದ್ದು, ತಪ್ಪುಹಾದಿಯಲ್ಲಿ ನಡೆಯವವರಿಗೆ ಸರಿಯಾದ ದಾರಿ ಯಲ್ಲಿ ನಡೆಯಲು ಪ್ರೇರಣೆ ನೀಡುತ್ತದೆ. ಕನಕದಾಸರು, ಪುರಂದರ ದಾಸರಂತಹ ದಾರ್ಶನಿಕರ ಬಗ್ಗೆ ಯುವ ಸಮುದಾಯಕ್ಕೆ ತಿಳುವಳಿಕೆ ನೀಡಬೇಕಾಗಿದೆ ಎಂದು ಅವರು ತಿಳಿಸಿದರು.
ಕನಕದಾಸರ ಕುರಿತು ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್, ಉಡುಪಿ ಡಿವೈಎಸ್ಪಿಜೈಶಂಕರ್, ಉಡುಪಿ ಜಿಲ್ಲಾ ಕನಕದಾಸ ಸೇವಾ ಸಂಘದ ಗೌರವಾಧ್ಯಕ್ಷ ಮೇಟಿ ಮುದಿಯಪ್ಪ, ಅಧ್ಯಕ್ಷ ಹನುಮಂತ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಸ್ವಾಗತಿಸಿದರು. ಹಿರಿಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.