Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಐಎಸ್ಎಫ್: ಬಾಬರಿ ಮಸ್ಜಿದ್ ಪುನರ್...

ಐಎಸ್ಎಫ್: ಬಾಬರಿ ಮಸ್ಜಿದ್ ಪುನರ್ ನಿರ್ಮಿಸುವ ಕುರಿತು ಜನಜಾಗೃತಿ

ವಾರ್ತಾಭಾರತಿವಾರ್ತಾಭಾರತಿ16 Dec 2018 7:34 PM IST
share
ಐಎಸ್ಎಫ್: ಬಾಬರಿ ಮಸ್ಜಿದ್ ಪುನರ್ ನಿರ್ಮಿಸುವ ಕುರಿತು ಜನಜಾಗೃತಿ

ಸಾಲ್ಮಿಯಾ, ಡಿ. 16: ಇಂಡಿಯನ್ ಸೋಶಿಯಲ್ ಫೋರಮ್ ಕುವೈಟ್ (ಐಎಸ್ಎಫ್) ಕರ್ನಾಟಕ ಚಾಪ್ಟರ್ ಇದರ ವತಿಯಿಂದ ಬಾಬರಿ ಮಸ್ಜಿದ್ ನೆನಪಿಗಾಗಿ “ಬಾಬರಿ ಮರಳಿ ಪಡೆಯಿರಿ ಭಾರತ ಮರಳಿ ಪಡೆಯಿರಿ” ಎಂಬ ಸಾರ್ವಜನಿಕ ಕಾರ್ಯಕ್ರಮ ಸಾಲ್ಮಿಯಾ ಹಾರ್ಮೊನಿ ಹಾಲ್ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಇಂಡಿಯನ್ ಸೋಶಿಯಲ್ ಫೋರಮ್ ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಿರಾಜ್ ಕಲ್ಲಡ್ಕ ಅವರು “ಬಾಬ್ರಿ ಮಸೀದಿ ದ್ವಂಸ ಪ್ರಕರಣವು ಭಾರತದ ಸಂವಿಧಾನ ಕೊಡಮಾಡಿದ ಧಾರ್ಮಿಕ ಸ್ವಾತಂತ್ರ್ಯದ ಹರಣವಾಗಿದೆ. ಈ ಕಾರ್ಯಕ್ಕೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ನೆರವಾದವರೆಲ್ಲಾ ಯಾವುದೇ ರೀತಿಯ ಕಾನೂನು ಕ್ರಮಗಳಿಗೊಳಗಾಗದೆ ಆರಾಮವಾಗಿ ವಿಹರಿಸುತ್ತಿದ್ದಾರೆ. ಈ ಬಗ್ಗೆ ಸರಕಾರವನ್ನು ಎಚ್ಚರಿಸಬೇಕಾದ ಮುಸ್ಲಿಮರು ಮತ್ತು ಜಾತ್ಯಾತೀತ ಮಂದಿ ದುರದೃಷ್ಟವಶಾತ್ ಇಂದು ನಿರ್ಲಕ್ಷದಿಂದ ಕಾಲ ಕಳೆಯುತ್ತಿದ್ದಾರೆ. ಈ ಕುರಿತು ಸಮಾಜದಲ್ಲಿ ಪ್ರಜ್ಞಾವಂತಿಕೆ ಬೆಳೆಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ” ಎಂದರು.

ವಿವಿಧ ಜಾತಿ ಧರ್ಮಗಳ ಜನರು ಪರಸ್ಪರ ವಿಶ್ವಾಸ ನಂಬಿಕೆಯಿಂದ ಅನ್ಯೋನ್ಯವಾಗಿರುವಾಗ ಭಾರತದ ಸೌಹಾರ್ದ ವಾತಾವರಣವನ್ನು ನಾಶಗೊಳಿಸಿ ಪರಸ್ಪರ ಅಪನಂಬಿಕೆಯಿಂದ ಕಳೆಯುವಂತಾಗಲು ಬಿಜೆಪಿ ನೇತೃತ್ವದಲ್ಲಿ ಸಂಘಪರಿವಾರ ನಡೆಸಿದ ಹುನ್ನಾರವಾಗಿದೆ. ಬಾಬ್ರಿ ಮಸ್ಜಿದ್ ಮರು ನಿರ್ಮಾಣಕ್ಕೆ  ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು. ಆ ಮೂಲಕ ಇಲ್ಲಿನ ಸಂವಿಧಾನ ವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು ಎಂದ ಅವರು ಬಾಬರೀ ಮಸ್ಜಿದನ್ನು ಕಳೆದುಕೊಂಡ ಮುಸ್ಲಿಮರು ಕಾನೂನಿನ ಮೇಲೆ ನಂಬಿಕೆಯಿಟ್ಟು, ಕಳೆದ ಕಾಲು ಶತಮಾನದಿಂದ ನ್ಯಾಯಮಂದಿರದ ಮುಂದೆ ನಿಂತಿದ್ದಾರೆ. ಆದರೆ ಬಾಬ್ರಿ ಮಸ್ಜಿದನ್ನು ದ್ವಂಸಗೊಳಿಸಿದ ಸಂಘಪರಿವಾರದ ಅದೇ ಶಕ್ತಿಗಳು ಇದಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವಾಗಲೇ ನ್ಯಾಯಾಂಗ ವ್ಯವಸ್ಥೆಗೆ ಸವಾಲೆಸೆಯುವ ರೀತಿಯಲ್ಲಿ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣದ ಬೆದರಿಕೆಯೊಡ್ಡುತ್ತಿರುವುದು ದುರದೃಷ್ಟಕರ ಮತ್ತು ಆಡಳಿತ ವ್ಯವಸ್ಥೆಯು ಅದಕ್ಕೆ ನೀಡುತ್ತಿರುವ ಮೌನ ಸಮ್ಮತಿಯು ಅಪಾಯಕಾರಿ ಎಂದು ಎಚ್ಚರಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕುವೈಟ್ ಮಣಿಪುರ ಅಸೋಸಿಯೇಷನ್ ಗೌರವಾಧ್ಯಕ್ಷ ಸಯ್ಯದ್ ಬ್ಯಾರಿ , ಕುವೈಟ್ ಕೇರಳ ಮುಸ್ಲಿಂ ಅಸೋಸಿಯೇಷನ್ ಕರ್ನಾಟಕ ಬ್ರಾಂಚ್ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಮತ್ತು  ಕುವೈಟ್ ಇಂಡಿಯಾ ಫ್ರೆಟರ್ನಿಟಿ ಫೋರಮ್ ಕರ್ನಾಟಕ ವಲಯ ರಾಜ್ಯ ಸಮಿತಿ ಸದಸ್ಯ ಇಕ್ಬಾಲ್ ಬಡ್ಡೂರ್ ಸಭಿಕರುನ್ನುದ್ದೇಶಿಸಿ ಮಾತನಾಡಿದರು.

ಐಎಸ್ಎಫ್ ಕರ್ನಾಟಕ ಚಾಪ್ಟರ್ ಅಧ್ಯಕ್ಷ ರಫೀಕ್ ಮಂಚಿ ಸ್ವಾಗತಿಸಿದರು, ಆಸೀಫ್ ಕಾಪು ವಂದಿಸಿದರು. ಇಮ್ತಿಯಾಝ್ ಅಹ್ಮದ್ ಅರ್ಕುಳ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X