ಯುವ ಸಮುದಾಯದಿಂದ ಕಲೆ ಉಳಿಯಲು ಸಾಧ್ಯ: ದಿನಕರ ಬಾಬು
ಉಡುಪಿ ಜಿಲ್ಲಾ ಮಟ್ಟದ ಯುವಜನ ಮೇಳ ಉದ್ಘಾಟನೆ

ಹೆಬ್ರಿ, ಡಿ.16: ಸರಕಾರ ಯುವಕರಿಗೆ ಚೈತನ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದು, ಕಲೆ ಉಳಿಸಲು ಯುವ ಸಮುದಾಯದ ಜೊತೆಗೆ ಪಂಚಾಯತ್ ರಾಜ್ ವ್ಯವಸ್ಥೆ ಸಂಪೂರ್ಣವಾಗಿ ಕೈಜೋಡಿಸಬೇಕು. ಆಗ ಮಾತ್ರ ನಶಿಸುವ ಕಲೆಗಳು ನಮ್ಮಲ್ಲಿ ಉಳಿಯಲು ಸಾಧ್ಯ ಎಂದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಹೆಬ್ರಿ ಚೈತನ್ಯ ಯುವ ವೃಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ ಹೆಬ್ರಿ ಚೈತನ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಎರಡು ದಿನಗಳ ಉಡುಪಿ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಶನಿವಾರ ಉದ್ಘಾಟಿಸಿ ಅವರು ಮಾತ ನಾಡುತಿದ್ದರು.
ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ, ಚೈತನ್ಯ ಯುವ ವೃಂದದ ಪೋಷಕ ಎಚ್.ಭಾಸ್ಕರ ಜೋಯಿಸ್, ಅಜೆಕಾರು ವಲಯ ಬಂಟರ ಸಂಘದ ಅಧ್ಯಕ್ಷ ಮುನಿಯಾಲು ಉದಯ ಶೆಟ್ಟಿ ಮಾತನಾಡಿದರು. ಹೆಬ್ರಿ ಗ್ರಾಪಂ ಅಧ್ಯಕ್ಷ ಎಚ್.ಕೆ.ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು.
ನೀಲಾವರ ಕರುಣಾಕರ ರಾವ್ ಮತ್ತು ಶರಣ್ ಕುಮಾರ್ ಮಟ್ಟು ಜಿಲ್ಲಾ ಯುವ ಪ್ರಶಸ್ತಿ ಮತ್ತು ತೆಂಕು ಭಿರ್ತಿ ಅಂಬೇಡ್ಕರ್ ಯುವಕ ಮಂಡಲ ಹಾಗೂ ಸಾಣೂರು ಯುವಕ ಮಂಡಲಕ್ಕೆ ಜಿಲ್ಲಾ ಮಟ್ಟದ ಸಾಂಘಿಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಜಿಪಂ ಸದಸ್ಯೆ ಜ್ಯೋತಿ ಹರೀಶ್ ಪೂಜಾರಿ, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಮೃತ್ ಕುಮಾರ್ ಶೆಟ್ಟಿ, ಅವಿಭಜಿತ ದ.ಕ. ಜಿಲ್ಲಾ ಜವಳಿ ವರ್ತಕರ ಸಂಘದ ಅಧ್ಯಕ್ಷ ಹೆಬ್ರಿ ಯೋಗೀಶ್ ಭಟ್, ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಎಚ್.ರಾಜೇಶ ನಾಯಕ್, ಚೈತನ್ಯ ಯುವ ವೃಂದದ ಅಧ್ಯಕ್ಷ ಶಂಕರ ಶೇರಿಗಾರ್, ಪ್ರಧಾನ ಕಾರ್ಯದರ್ಶಿ ಉದಯ ದೇವಾಡಿಗ, ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ನರೇಂದ್ರ ನಾಯಕ್, ಕಾರ್ಕಳ ತಾಲೂಕು ಕ್ರೀಡಾಧಿ ಕಾರಿ ಫೆಡ್ರಿಕ್ ರೆಬೆಲ್ಲೋ ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಂಕರ ಶೇರಿಗಾರ್ ವಂದಿಸಿದರು. ಪ್ರಶಾಂತ ಶೆಟ್ಟಿ, ಪ್ರಕಾಶ ಪೂಜಾರಿ, ಪ್ರಸಾದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಇದಕ್ಕೂ ಮುನ್ನ ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನದಿಂದ ವ್ಯ ಮೆರವಣಿಗೆ ನಡೆಯಿತು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಹೆಬ್ರಿ ಗ್ರಾಪಂ ಅಧ್ಯಕ್ಷ ಎಚ್.ಕೆ.ಸುಧಾಕರ್ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ಪ್ರಕಾರಗಳು ಮತುತಿ ಕಲಾವಿದರು, ಗಣ್ಯರು ಪಾಲ್ಗೊಂಡಿದ್ದರು.