Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಾಂಧಿ ಕಥೆ...

ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಾಂಧಿ ಕಥೆ ಹೇಳಲು ತೋಟಗಾರಿಕೆ ಇಲಾಖೆ ಸಿದ್ಧತೆ

ಮಹಾತ್ಮ ಗಾಂಧೀಜಿಯ 150ನೇ ಜನ್ಮ ವರ್ಷಾಚರಣೆ

ವಾರ್ತಾಭಾರತಿವಾರ್ತಾಭಾರತಿ16 Dec 2018 10:48 PM IST
share

ಬೆಂಗಳೂರು, ಡಿ.16: ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಾಂಧೀಜಿಯವರ ಕಥೆ ಹೇಳಲು ರಾಜ್ಯ ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ.

ಈ ಬಾರಿಯ ಗಣರಾಜ್ಯೋತ್ಸವಕ್ಕಾಗಿ ಏರ್ಪಡಿಸಲಾಗಿರುವ 209ನೇ ಫಲಪುಷ್ಪಪ್ರದರ್ಶನವನ್ನು ಗಾಂಧೀಜಿ ಅವರಿಗೇ ಸಮರ್ಪಣೆ ಮಾಡಬೇಕೆಂದು ಕೌನ್ಸಿಲ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನೂ ಒಂದು ಸುತ್ತಿನ ಸಭೆ ನಡೆಯಬೇಕಿದ್ದು, ಅಂತಿಮ ಯೋಜನೆ ರೂಪುಗೊಳ್ಳಲಿದೆ.

ಪ್ರದರ್ಶನದಲ್ಲಿ ಗಾಂಧಿ ಸಂದೇಶ ಸಾರುವುದಲ್ಲದೆ, ಗಾಜಿನ ಮನೆಯ ಹೊರಭಾಗದಲ್ಲಿ ಗಾಂಧಿ ಕುರಿತು ಛಾಯಾಚಿತ್ರಗಳ ಪ್ರದರ್ಶನ, ಸಿರಿಧಾನ್ಯ ಹುಲ್ಲಿನಲ್ಲಿ ಬಾಪೂಜಿ ಪ್ರತಿಮೆ ಹಾಗೂ ಸ್ವಚ್ಛ ಭಾರತವನ್ನು ಪ್ರತಿನಿಧಿಸುವ ಗಾಂಧಿ ಕನ್ನಡಕ ರೂಪಿಸುವ ಚಿಂತಿಸಲಾಗುತ್ತಿದೆ.

ಪ್ರದರ್ಶನಕ್ಕೆ ಸುಮಾರು 1.8 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಪುಣೆ, ಊಟಿ ಸೇರಿದಂತೆ ವಿವಿಧೆಡೆಯಿಂದ ಹೂಗಳನ್ನು ತರಿಸಿಕೊಳ್ಳಲಿದ್ದು, ಚೆಂಡು, ಸೇವಂತಿ, ಗುಲಾಬಿ ಹೀಗೆ, ಬಗೆಬಗೆಯ ಹೂಗಳ ಸುಮಾರು 25 ಸಾವಿರಕ್ಕೂ ಹೆಚ್ಚು ಕುಂಡಗಳು ಇಲಾಖೆಯಲ್ಲೇ ಲಭ್ಯವಿರುವುದಾಗಿ ತಿಳಿದು ಬಂದಿದೆ.

ಮೂರು ಕೋತಿ: ಗಾಜಿನಮನೆಯಲ್ಲಿ ಬಾಪು ಕುಟೀರ, ಗಾಂಧಿ ಚರಕ, ಸಬರಮತಿ ಆಶ್ರಮ, ರಾಜ್ ಘಾಟ್, ದಂಡಿ ಸತ್ಯಾಗ್ರಹ ಸೇರಿದಂತೆ ಬಾಪು ಅವರನ್ನು ನೆನಪಿಸುವ ದೃಶ್ಯಗಳು ಹೂಗಳಲ್ಲಿ ಮೈದಳೆಯಲಿವೆ. ಅಷ್ಟೇ ಅಲ್ಲದೆ, ಕೆಟ್ಟದ್ದನ್ನು ಕೇಳಬೇಡ, ಕೆಟ್ಟದ್ದನ್ನು ನೋಡಬೇಡ, ಕೆಟ್ಟದ್ದನ್ನು ಮಾತನಾಡಬೇಡ ಎಂಬ ಸಂದೇಶ ಸಾರುವ ಮೂರು ಕೋತಿಗಳೂ ರೂಪು ತಾಳಲಿದ್ದು, ಫಲಪುಷ್ಪಪ್ರದರ್ಶನ ಜ.18 ರಿಂದ 27ರ ತನಕ ನಡೆಯಲಿದೆ.

ಪ್ರವೇಶ ಶುಲ್ಕ

* ವಿದ್ಯಾರ್ಥಿಗಳಿಗೆ ಮತ್ತು ಶಾಲಾ ಬಸ್‌ಗಳಿಗೆ ಪ್ರವೇಶ ಉಚಿತ

* ದೊಡ್ಡವರಿಗೆ 70 ರೂ.

* ಮಕ್ಕಳಿಗೆ 20 ರೂ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X