ಉಡುಪಿ: ಡಿ.18, 19ರ ಧರಣಿ ಸತ್ಯಾಗ್ರಹ ಮುಂದೂಡಿಕೆ
ಉಡುಪಿ, ಡಿ.17: ತಮ್ಮ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.18 ಮತ್ತು 19ರಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಉಡುಪಿ ಜಿಲ್ಲಾ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಮುಂದೂ ಡಲಾಗಿದೆ ಎಂದು ಸಂಘ ತಿಳಿಸಿದೆ.
ಕಳೆದ ಜುಲೈ ತಿಂಗಳಿನಿಂದ ಉಡುಪಿ ಜಿಲ್ಲೆಯಲ್ಲಿ ಬೀಯರ್ ಖರೀದಿಗೆ ಅಧಿಕಾರಿಗಳು ವೌಖಿಕವಾಗಿ ನಿರ್ಬಂಧ ವಿಧಿಸುತಿದ್ದು, ಈ ಬಗ್ಗೆ ಅಬಕಾರಿ ಆಯುಕ್ತರು, ಉಡುಪಿ ಜಿಲ್ಲಾಧಿಕಾರಿ, ಅಬಕಾರಿ ಜಂಟಿ ಆಯುಕ್ತರು ಹಾಗೂ ಅಬಕಾರಿ ಉಪ ಆಯುಕ್ತರಿಗೆ ಮನವಿ ಸಲ್ಲಿಸಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದರೂ ಸಮಸ್ಯೆ ಬಗೆಹರಿಯದೇ ಇದ್ದುದರಿಂದ ಧರಣಿಯನ್ನು ಹಮ್ಮಿ ಕೊಳ್ಳಲಾಗಿತ್ತು. ಈ ಕುರಿತು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಧರಣಿಯನ್ನು ತಾತ್ಕಾಲಿಕವಾಗಿ ಹಿಂದೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜನಾರ್ದನ ಎಂ.ಪೂಜಾರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story