Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ ಆಡಳಿತ ಮಂಡಳಿಗೆ ಜನವರಿ...

ಕರ್ನಾಟಕ ಆಡಳಿತ ಮಂಡಳಿಗೆ ಜನವರಿ ಅಂತ್ಯದೊಳಗೆ ಸದಸ್ಯರ ಭರ್ತಿ: ಸಚಿವ ಕೃಷ್ಣಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ17 Dec 2018 7:26 PM IST
share
ಕರ್ನಾಟಕ ಆಡಳಿತ ಮಂಡಳಿಗೆ ಜನವರಿ ಅಂತ್ಯದೊಳಗೆ ಸದಸ್ಯರ ಭರ್ತಿ: ಸಚಿವ ಕೃಷ್ಣಭೈರೇಗೌಡ

ಬೆಳಗಾವಿ, ಡಿ.17: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಗೆ ಐದು ಸದಸ್ಯರನ್ನು ನೇಮಿಸುವ ಪ್ರಸ್ತಾವವನ್ನು ಕೇಂದ್ರ ಸರಕಾರಕ್ಕೆ ಕಳುಹಿಸಲಾಗಿದ್ದು, ಜನವರಿ ಅಂತ್ಯದೊಳಗೆ ಭರ್ತಿ ಮಾಡಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಪೀಠ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯ ಎರಡು ಪೀಠಗಳು ಉತ್ತರ ಕರ್ನಾಟಕ ಭಾಗದಲ್ಲಿ ಕಾರ್ಯನಿರ್ವಹಿಸುವ ಸಲುವಾಗಿ ನ್ಯಾಯಮಂಡಳಿಗೆ ಐದು ಸದಸ್ಯರನ್ನು ನೇಮಿಸುವ ಪ್ರಸ್ತಾವವನ್ನು ಕೇಂದ್ರ ಗೃಹ ಇಲಾಖೆ ಹಾಗೂ ಕಾನೂನು ಇಲಾಖೆಗೆ ಒಂದೂವರೆ ತಿಂಗಳ ಹಿಂದೆ ಕಳುಹಿಸಲಾಗಿದೆ ಎಂದರು.

ಶೀಘ್ರವೇ ಕೇಂದ್ರ ಸರಕಾರ ಇದಕ್ಕೆ ಒಪ್ಪಿಗೆ ನೀಡಲಿದ್ದು, ಜನವರಿ ಅಂತ್ಯದೊಳಗೆ ಐದು ಸದಸ್ಯರನ್ನು ಭರ್ತಿ ಮಾಡಲಾಗುವುದು. ಈ ಮೂಲಕ ಆಡಳಿತ ನ್ಯಾಯಮಂಡಳಿಯ ಬೆಳಗಾವಿ ಮತ್ತು ಕಲಬುರ್ಗಿ ಪೀಠಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿವೆ ಎಂದು ಅವರು ಹೇಳಿದರು.

2015ರಲ್ಲಿ ಬೆಳಗಾವಿ ಮತ್ತು ಕಲಬುರ್ಗಿಯಲ್ಲಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಪೀಠಗಳನ್ನು ಸ್ಥಾಪಿಸಲು ಸರಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ಇಂದು ಬೆಳಗಾವಿ ಪೀಠ ಉದ್ಘಾಟನೆಗೊಂಡು ಇಂದಿನಿಂದಲೇ ಕಾರ್ಯ ನಿರ್ವಹಿಸಲಿದೆ. ಇನ್ನೆರಡು ವಾರಗಳಲ್ಲಿ ಕಲಬುರ್ಗಿ ನ್ಯಾಯ ಮಂಡಳಿ ಪೀಠವು ಉದ್ಘಾಟನೆಗೊಳ್ಳಲಿದೆ ಎಂದು ಕೃಷ್ಣಭೈರೇಗೌಡ ಭರವಸೆ ನೀಡಿದರು.

ಉತ್ತರ ಕರ್ನಾಟಕ ಭಾಗಕ್ಕೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯ ಎರಡೂ ಪೀಠಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಈ ಭಾಗದ ಪ್ರಕರಣಗಳು ಶೀಘ್ರ ಗತಿಯಲ್ಲಿ ಇತ್ಯರ್ಥವಾಗಲು ಅನುಕೂಲವಾಗಿದೆ. ಈ ಮೂಲಕ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಜನರ ಬಳಿಗೆ ಆಡಳಿತ ವ್ಯವಸ್ಥೆಯನ್ನು ಕೊಂಡೊಯ್ದಿದೆ ಎಂದು ಅವರು ತಿಳಿಸಿದರು.

ಬೆಳಗಾವಿ ಉತ್ತರ ವಿಧಾನಸಭೆ ಕ್ಷೇತ್ರದ ಶಾಸಕ ಅನಿಲ ಬೆನಕೆ ಮಾತನಾಡಿ, ಕರ್ನಾಟಕ ರಾಜ್ಯ ನ್ಯಾಯ ಮಂಡಳಿ ಬೆಳಗಾವಿ ಪೀಠ ಸ್ಥಾಪನೆ ಮಾಡಬೇಕೆಂಬ ಉದ್ದೇಶದಿಂದ ನಡೆದ ಹೋರಾಟಕ್ಕೆ ಜಯ ಸಂದಿದೆ. ಈ ಹಂತದಲ್ಲಿ ಹೋರಾಟದಲ್ಲಿ ಭಾಗಿಯಾದ ಹಲವಾರು ವಕೀಲರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಪ್ರಕರಣಗಳನ್ನು ಹಿಂಪಡೆಯುವಂತೆ ಸರಕಾರಕ್ಕೆ ಮನವಿ ಮಾಡಿದರು. ಅಲ್ಲದೇ ನ್ಯಾಯ ಮಂಡಳಿ ಪೀಠಕ್ಕೆ ಸ್ವಂತ ಕಟ್ಟಡ ಶೀಘ್ರದಲ್ಲಿ ಒದಗಿಸುವಂತೆ ಅವರು ಸಚಿವರ ಗಮನಕ್ಕೆ ತಂದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ಅಧ್ಯಕ್ಷ ನ್ಯಾಯಮೂರ್ತಿ ಡಾ.ಕೆ. ಭಕ್ತವತ್ಸಲ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ನ್ಯಾಯಮಂಡಳಿ ಪೀಠ ಸ್ಥಾಪನೆಗೆ ಹೋರಾಟಗಳು ನಡೆದಿದ್ದವು. ಅದರ ಪ್ರತಿಫಲವಾಗಿ ಇಂದು ಸುಸಜ್ಜಿತ ನ್ಯಾಯಪೀಠ ಉದ್ಘಾಟನೆಗೊಂಡಿದ್ದು, ಇಂದಿನಿಂದಲೇ ಪೀಠ ಕರ್ತವ್ಯ ನಿರ್ವಹಿಸಲಿದೆ. ಎಲ್ಲರಿಗೂ ನ್ಯಾಯ ಸಿಗುವ ನಿಟ್ಟಿನಲ್ಲಿ ನ್ಯಾಯಮಂಡಳಿ ಕಾರ್ಯ ನಿರ್ವಹಿಸಲಿದ್ದು, ಇದರ ಸದ್ಬಳಕೆ ಆಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸರಕಾರದ ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ, ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ರಿಜಿಸ್ಟ್ರಾರ್ ರಾಜನ್, ಸರಕಾರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಬೆಳಗಾವಿ ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್. ಕಿವಡಸಣ್ಣವರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X