ರಫೇಲ್ ಒಪ್ಪಂದ : ಪ್ರಧಾನಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಮಂಡನೆ
ಹೊಸದಿಲ್ಲಿ, ಡಿ.17: ರಫೇಲ್ ವಿವಾದದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೇಳಿದ ದಾಖಲೆಯ ಕುರಿತು ಕೇಂದ್ರ ಸರಕಾರ ತಪ್ಪು ಮಾಹಿತಿ ನೀಡಿದೆ. ಆದ್ದರಿಂದ ಪ್ರಧಾನಿ ಮೋದಿ ವಿರುದ್ಧ ಸಂಸತ್ತು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಕಾಂಗ್ರೆಸ್ ಸಂಸದ ಸುನಿಲ್ ಜಖರ್ ಪ್ರಧಾನಿ ವಿರುದ್ಧ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ಮಂಡಿಸಿದರೆ ರಾಜ್ಯಸಭೆಯಲ್ಲಿ ಕಾನೂನು ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಮಂಡಿಸಲಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಅಫಿದಾವಿತ್ ಸಲ್ಲಿಸಲು ಕಾನೂನು ಸಚಿವ ಪ್ರಸಾದ್ ಹಸಿರು ನಿಶಾನೆ ತೋರಿರುವ ಕಾರಣ ಸರಕಾರ, ಅದರಲ್ಲೂ ಪ್ರಮುಖವಾಗಿ ಸಚಿವ ಪ್ರಸಾದ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಮಂಡಿಸಿದ್ದೇನೆ ಎಂದು ರಾಜ್ಯಸಭೆಯಲ್ಲಿ ವಿಪಕ್ಷಗಳ ಮುಖಂಡ ಗುಲಾಂ ನಬಿ ಆಝಾದ್ ತಿಳಿಸಿದ್ದಾರೆ. ಸರಕಾರ ಸುಪ್ರೀಂಕೋರ್ಟ್‌ಗೆ ತಪ್ಪು ಮಾಹಿತಿ ನೀಡಿರುವ ಪ್ರಕರಣ ಇದೇ ಮೊದಲ ಬಾರಿ ನಡೆದಿದೆ ಎಂದವರು ಹೇಳಿದರು.
Next Story