ದ.ಕ.ಅಸಂಘಟಿತ ಕಾರ್ಮಿಕರ ಕಾಂಗ್ರೆಸ್‌ಗೆ ನೇಮಕ

ಮಂಗಳೂರು, ಡಿ.17: ದ.ಕ.ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಹಾಲಿ ಉಸ್ತುವಾರಿ ಸಚಿವ ಯು.ಟಿ ಖಾದರ್, ವಿಧಾನ ಪರಿಷತ್ ಸದಸ್ಯ ಮತ್ತು ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್‌ರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಶಾಂತವೀರ ನಾಯ್ಕ ಅವರು ದ.ಕ.ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಅಧ್ಯಕ್ಷರಾಗಿ ಬಿ.ಎಂ ಅಬ್ಬಾಸ್ ಅಲಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇಂಜಿನಿಯರಿಂಗ್ ಪದವೀಧರರಾಗಿರುವ ಬಿ.ಎಂ ಅಬ್ಬಾಸ್ ಅಲಿ ಎನ್‌ಎಸ್‌ಯುಐ, ಯುವ ಕಾಂಗ್ರೆಸ್‌ನ ಪದಾಧಿಕಾರಿಯಾಗಿ, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.
Next Story