Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಜ್ಜನ್ ಕುಮಾರ್ ಕುರಿತು ಕೋರ್ಟ್...

ಸಜ್ಜನ್ ಕುಮಾರ್ ಕುರಿತು ಕೋರ್ಟ್ ತೀರ್ಪಿನಲ್ಲಿ 2002ರ ಗುಜರಾತ್ ದಂಗೆಗಳು ಉಲ್ಲೇಖವಾಗಿದ್ದೇಕೆ...?

1984ರ ಸಿಖ್ ವಿರೋಧಿ ದಂಗೆ

ವಾರ್ತಾಭಾರತಿವಾರ್ತಾಭಾರತಿ17 Dec 2018 8:58 PM IST
share
ಸಜ್ಜನ್ ಕುಮಾರ್ ಕುರಿತು ಕೋರ್ಟ್ ತೀರ್ಪಿನಲ್ಲಿ 2002ರ ಗುಜರಾತ್ ದಂಗೆಗಳು ಉಲ್ಲೇಖವಾಗಿದ್ದೇಕೆ...?

ಹೊಸದಿಲ್ಲಿ,ಡಿ.17: ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರನ್ನು 198ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಅಪರಾಧಿಯೆಂದು ಸೋಮವಾರ ಘೋಷಿಸಿರುವ ದಿಲ್ಲಿ ಉಚ್ಚ ನ್ಯಾಯಾಲಯದ ತೀರ್ಪು ಇತರ ಸಾಮೂಹಿಕ ಹತ್ಯಾಕಾಂಡಗಳನ್ನೂ ಪ್ರಸ್ತಾಪಿಸಿದೆ. ಇಂತಹ ಘಟನೆಗಳಲ್ಲಿ ಪಾತಕಿಗಳು ರಾಜಕೀಯ ಕೃಪಾಶ್ರಯ ಹೊಂದಿರುವುದರಿಂದ ಮತ್ತು ಶಿಕ್ಷೆಯಿಂದ ನುಣುಚಿಕೊಳ್ಳಲು ಯಶಸ್ವಿಯಾಗುವುದರಿಂದ ಅವರನ್ನು ಕಾನೂನಿನ ಶಿಕ್ಷೆಗೆ ಗುರಿಪಡಿಸುವುದು ಸವಾಲಿನ ಕೆಲಸವಾಗಿದೆ ಎಂದಿರುವ ತೀರ್ಪು,ಮಾನವತೆಯ ವಿರುದ್ಧದ ಅಪರಾಧಗಳಾಗಲೀ ನರಮೇಧಗಳಾಗಲೀ ನಮ್ಮ ದೇಶೀಯ ಕಾನೂನಿನ ಭಾಗವಾಗಿಲ್ಲ ಮತ್ತು ಈ ಲೋಪವನ್ನು ತಕ್ಷಣವೇ ಸರಿಪಡಿಸಬೇಕಾದ ಅಗತ್ಯವಿದೆ ಎಂದು ಹೇಳಿದೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆದ ಇಂತಹ ಇತರ ಘಟನೆಗಳನ್ನು ನ್ಯಾಯಾಲಯವು ಪಟ್ಟಿ ಮಾಡಿದೆ.

ದಿಲ್ಲಿಯೊಂದರಲ್ಲೇ 2,733 ಮತ್ತು ದೇಶಾದ್ಯಂತ ಸುಮಾರು 3,350 ಸಿಕ್ಖರನ್ನು ಬರ್ಬರವಾಗಿ ಹತ್ಯೆಗೈದ ನವೆಂಬರ್ 1984ರ ದಂಗೆಗಳು ಸಾಮೂಹಿಕ ಅಪರಾಧದ ಮೊದಲ ಘಟನೆಯಲ್ಲ,ದುರದೃಷ್ಟವಶಾತ್ ಕೊನೆಯ ಘಟನೆಯೂ ಅಲ್ಲ. ದೇಶದ ವಿಭಜನೆಯ ಸಂದರ್ಭದಲ್ಲಿ ಪಂಜಾಬ್,ದಿಲ್ಲಿ ಮತ್ತು ಇತರೆಡೆಗಳಲ್ಲಿ ನಡೆದಿದ್ದ ನರಮೇಧಗಳು 1984ರ ನವೆಂಬರ್‌ನಲ್ಲಿ ನಡೆದಿದ್ದ ಅಮಾಯಕ ಸಿಕ್ಖರ ಹತ್ಯೆಗಳಷ್ಟೇ ಯಾತನದಾಯಕ ನೆನಪುಗಳಾಗಿ ಉಳಿದುಕೊಂಡಿವೆ. 1993ಲ್ಲಿ ಮುಂಬೈ,2002ರಲ್ಲಿ ಗುಜರಾತ್,2008ರಲ್ಲಿ ಒಡಿಶಾದ ಕಂಧಮಾಲ್‌ನಲ್ಲಿ ಮತ್ತು 2013ರಲ್ಲಿ ಉತ್ತರ ಪ್ರದೇಶದ ಮುಝಫ್ಫರ್‌ನಗರದಲ್ಲಿ ನಡೆದಿದ್ದ ನರಮೇಧಗಳು ಸಮಾನ ಸ್ವರೂಪವನ್ನು ಹೊಂದಿದ್ದವು. ಇವು ಇಂತಹ ಕೆಲವು ಪ್ರಕರಣಗಳಷ್ಟೇ ಎಂದು ನ್ಯಾಯಾಲಯವು ಹೇಳಿದೆ.

ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿದ್ದು ಮತ್ತು ಕಾನೂನು ಜಾರಿ ಸಂಸ್ಥೆಗಳ ಬೆಂಬಲದೊಂದಿಗೆ ರಾಜಕೀಯ ನಾಯಕರು ದಾಳಿಗಳ ನೇತೃತ್ವ ವಹಿಸಿದ್ದು ಈ ಎಲ್ಲ ಸಾಮೂಹಿಕ ಅಪರಾಧಗಳಲ್ಲಿಯ ಸಮಾನ ಅಂಶವಾಗಿತ್ತು ಎಂದು ನ್ಯಾಯಾಲಯವು ಹೇಳಿದೆ.

ಎಲ್ಲ ವಿಚಾರಣೆಗಳು ಖುಲಾಸೆಗಳಲ್ಲಿ ಅಂತ್ಯಗೊಂಡಿದ್ದರಿಂದ ತಮ್ಮನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು 1984ರ ಸಿಖ್ ವಿರೋಧಿ ದಂಗೆಗಳ ಸಂತ್ರಸ್ತರು ಭಾವಿಸಲು 2006ವರೆಗೂ ಎಲ್ಲ ಕಾರಣಗಳೂ ಇದ್ದವು ಎಂದು ಹೇಳಿರುವ ದಿಲ್ಲಿ ಉಚ್ಚ ನ್ಯಾಯಾಲಯವು,2002ರ ಗುಜರಾತ್ ದಂಗೆಗಳ ಪ್ರಕರಣಗಳಲ್ಲಿ ಸರ್ವೋಚ್ಚ ನ್ಯಾಯಾಲಯವು ವಿಶೇಷ ತನಿಖಾ ತಂಡ(ಸಿಟ್)ವನ್ನು ರಚಿಸಿದ್ದರೆ,1984ರ ದಂಗೆಗಳ ಕುರಿತು ತನಿಖೆಯನ್ನು ನಡೆಸಲು 2007ರವರೆಗೂ ಸಿಟ್ ರಚನೆಯಾಗಿರಲಿಲ್ಲ ಎಂದು ಬೆಟ್ಟು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X