ಟಿಪ್ಪರ್- ಬಸ್ ಢಿಕ್ಕಿ: ಹಲವು ಮಂದಿಗೆ ಗಾಯ
ಕಾರ್ಕಳ, ಡಿ.17: ಟಿಪ್ಪರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಕುಂಟಾಡಿ ಶಾಲೆಯ ಬಳಿ ತಿರುವಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಪಳ್ಳಿಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಬಸ್ಸಿಗೆ ಕಾರ್ಕಳ ಕಡೆಯಿಂದ ಪಳ್ಳಿ ಕಡೆಗೆ ಟಿಪ್ಪರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಬಸ್ಸಿನಲ್ಲಿ ಪ್ರಯಾಣಿಸು ತ್ತಿದ್ದ 30 ಪ್ರಯಾಣಿಕರ ಪೈಕಿ ಹಲವು ಮಂದಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story