ಸಂಗೊಳ್ಳಿ ಅಭಿವೃದ್ಧಿಗೆ ಡಿ.18 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ
ಬೆಂಗಳೂರು, ಡಿ. 17: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಧ್ಯಯನ ಸಮಿತಿಯ ಮೂಲಕ ಸಂಗೊಳ್ಳಿ ಮತ್ತು ನಂದಗಡದ ಸಮಗ್ರ ಅಭಿವೃದ್ಧಿಗೆ ನಾಳೆ (ಡಿ.18) ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.
ಸೋಮವಾರ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಹಿಂದಿನ ಸರಕಾರದ ವೇಳೆ ನೀಡಿರುವ 267 ಕೋಟಿ ರೂ.ಅನುದಾನದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.
ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಆವರಣದಲ್ಲಿ ನಾಳೆ ಸಂಜೆ 4 ಗಂಟೆಗೆ ಸಿಎಂ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ನೆರವೇರಿಸಲಿದ್ದು, ಮಾಜಿ ಸಿಎಂ ಸಿದ್ಧರಾಮಯ್ಯ, ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ ಎಂದು ರೇವಣ್ಣ ತಿಳಿಸಿದರು.
Next Story





