ಮಹಾಮೈತ್ರಿಗೆ ಬಲ
ಭೋಪಾಲದಲ್ಲಿ ಸೋಮವಾರ ನಡೆದ ಮಧ್ಯಪ್ರದೇಶ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಡಿಎಂಕೆ ವರಿಷ್ಠ ಎಂ.ಕೆ. ಸ್ಟಾಲಿನ್, ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕಮಲ್‌ನಾಥ್, ಎನ್‌ಸಿ ವರಿಷ್ಠ ಫಾರೂಕ್ ಅಬ್ದುಲ್ಲಾ, ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಎಲ್‌ಜೆಡಿ ವರಿಷ್ಠ ಶರದ್ ಯಾದವ್, ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ, ರಾಜಸ್ಥಾನದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅಶೋಕ್ ಗೆಹ್ಲೋಟ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರು ಪಾಲ್ಗೊಂಡರು. ಆ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮಹಾಮೈತ್ರಿ ಕೂಟ ರಚಿಸುವ ಪ್ರಬಲ ಸಂದೇಶವನ್ನು ನೀಡಿದ್ದಾರೆ.
Next Story





