Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೊಕ್ಕೊಟ್ಟು: ಒಳ ಚರಂಡಿಗೆ ಬಿದ್ದು ಲಾರಿ...

ತೊಕ್ಕೊಟ್ಟು: ಒಳ ಚರಂಡಿಗೆ ಬಿದ್ದು ಲಾರಿ ಪಲ್ಟಿ; ಕ್ಲೀನರ್ ಮೃತ್ಯು

ಟ್ರಾಫಿಕ್ ಪೊಲೀಸರ ವಿರುದ್ಧ ಸಾರ್ವಜನಿಕರಿಂದ ಹೆದ್ಧಾರಿ ತಡೆ

ವಾರ್ತಾಭಾರತಿವಾರ್ತಾಭಾರತಿ18 Dec 2018 1:15 PM IST
share
ತೊಕ್ಕೊಟ್ಟು: ಒಳ ಚರಂಡಿಗೆ ಬಿದ್ದು ಲಾರಿ ಪಲ್ಟಿ; ಕ್ಲೀನರ್ ಮೃತ್ಯು

ಕೊಣಾಣೆ, ಡಿ. 18: ರಾಷ್ಟ್ರೀಯ ಹೆದ್ದಾರಿ ತೊಕ್ಕೊಟು ಬಳಿ ಮಂಗಳೂರು ಕಡೆಯಿಂದ ಉಳ್ಳಾಲಕ್ಕೆ ಸಂಚರಿಸುತ್ತಿದ್ದ ಲಾರಿಯೊಂದನ್ನು ಟ್ರಾಫಿಕ್ ಪೊಲೀಸರು ತಡೆದು ನಿಲ್ಲಿಸಲೆತ್ನಿಸಿದರು ಎನ್ನಲಾಗಿದ್ದು, ಈ ವೇಳೆ ಲಾರಿಯ ಹಿಂದಿನ ಚಕ್ರ ಚರಂಡಿಗೆ ಬಿದ್ದು ಲಾರಿ ಪಲ್ಟಿಯಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಲಾರಿ ಕ್ಲೀನರ್ ಸಾವನ್ನಪ್ಪಿದ್ದಾರೆ.

ಶಿವಮೊಗ್ಗ ಶಿಕಾರಿಪುರ ಮೂಲದ ವಸಂತ ಕುಮಾರ್ (25) ಮೃತರು.

ಮೂಡಬಿದಿರೆಯಿಂದ ಉಳ್ಳಾಲದ ಫಿಶ್‍ಮಿಲ್‍ಗೆ ಕಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನುವ ತೊಕ್ಕೊಟ್ಟು ಜಂಕ್ಷನ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಟ್ರಾಫಿಕ್ ಪೊಲೀಸರು ನಿಲ್ಲಿಸುವಂತೆ ಸೂಚಿಸಿದ್ದು, ಈ ಸಂದರ್ಭ ಲಾರಿ ಚಾಲಕ ಜಯಪೂಜಾರಿ ಲಾರಿಯನ್ನು ತೊಕ್ಕೊಟ್ಟು ಹಳೇ ಚೆಕ್‍ಪೋಸ್ಟ್ ನ  ಕಿರಿದಾದ ರಸ್ತೆಯ ಬದಿಯಲ್ಲಿ ನಿಲ್ಲಿಸಲು ಹೋದಾಗ ಹಿಂಭಾಗದ ಚಕ್ರವು ಚರಂಡಿಗೆ ಬಿದ್ದು ಲಾರಿ ಉರುಳಿದೆ. ಈ ಸಂದರ್ಭ ಲಾರಿಯೊಳಗಿದ್ದ ವಸಂತ ಕುಮಾರ್ ಬೆದರಿ ಹಾರಲು ಯತ್ನಿಸಿದಾಗ ಅವರು ಲಾರಿಯಡಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೆದ್ದಾರಿ ದುರವಸ್ಥೆ ಹಾಗೂ ಪೊಲೀಸರ ಕ್ರಮದ ವಿರುದ್ಧ ಆಕ್ರೋಶ: ಹೆದ್ದಾರಿ ತಡೆ

ಘಟನೆಯಿಂದಾಗಿ ರೊಚ್ಚಿಗೆದ್ದ ಸಾರ್ವಜನಿಕರು ತೊಕ್ಕೊಟ್ಟುವಿನ ನಿರ್ಮಾಣ ಹಂತದ ಮೇಲ್ಸೇತುವೆ ಕಾಮಗಾರಿ, ಹೆದ್ದಾರಿ ದುರವಸ್ಥೆ ಹಾಗೂ ಟ್ರಾಫಿಕ್ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಟ್ಟು ಹಿಡಿದು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ಗಂಟೆಗಟ್ಟಲೆ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ಉಮಾಕಾಂತ್, ಎಸಿಪಿಗಳಾದ ಮಂಜುನಾಥ್ ಶೆಟ್ಟಿ, ರಾಮರಾವ್, ಉಳ್ಳಾಲ ಇನ್‍ಸ್ಪೆಕ್ಟರ್ ಗೋಪಿಕೃಷ್ಣ ಅವರು ಹರಸಾಹಸ ಪಟ್ಟು ಪ್ರತಿಭಟನಾಕಾರರ ಮನವೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಟ್ರಾಫಿಕ್ ಕಾರ್ಯಾಚರಣೆ ವಿರುದ್ಧ ಆಕ್ರೋಶ

ತೊಕ್ಕೊಟ್ಟುವಿನಲ್ಲಿ ನೆನೆಗುದಿಗೆ ಬಿದ್ದಿರುವ ಮೇಲ್ಸೇತುವೆ ಕಾಮಗಾರಿಯಿಂದಲೇ ಜನರು ರೋಸಿ ಹೋಗಿದ್ದು, ಅದರ ನಡುವೆ ಇಂತಹ ಕಿರಿದಾಗ ಇಕ್ಕಟ್ಟಿನ ಸ್ಥಳಗಳಲ್ಲಿ ಟ್ರಾಫಿಕ್ ಪೊಲೀಸರು ವಾಹನ ಸವಾರರನ್ನು ತಡೆದು ನಿಲ್ಲಿಸಿ ಕೇಸ್ ಹಾಕುತ್ತಿದ್ದಾರೆ ಎಂಬ ಆರೋಪವೂ ಪ್ರತಿಭಟನಕಾರರಿಂದ ಕೇಳಿ ಬಂದಿದೆ, ಅಲ್ಲದೆ ಕೊಲ್ಯ ಕಾಪಿಕಾಡು ಸರ್ವಿಸ್ ರಸ್ತೆ ನಿರ್ಮಾಣವಾಗದೆ ಇರುವ ಕಾರಣ ವಾಹನ ಸವಾರರು ಈ ಪ್ರದೇಶದಲ್ಲಿ ಬಹಳಷ್ಟು ವಾಹನ ಸವಾರರು ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದಾರೆ, ಅಲ್ಲದೆ ಸರ್ವಿಸ್ ರಸ್ತೆ ಮಾಡಿಕೊಡದ ನವಯುಗ ಕಂಪೆನಿ ವಿರುದ್ಧ ಯಾವುದೇ ಪ್ರಕರಣ ದಾಖಲಿಸದ ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X