Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಲಕ್ಕಾಗಿ ರೈತರ ಜಮೀನು ಹರಾಜಿಗೆ...

ಸಾಲಕ್ಕಾಗಿ ರೈತರ ಜಮೀನು ಹರಾಜಿಗೆ ಮುಂದಾದರೆ ಸರ್ಕಾರ 3 ಗಂಟೆಯೂ ಉಳಿಯಲ್ಲ: ಬಸವರಾಜಪ್ಪ

ರಾಜ್ಯ ರೈತ ಸಂಘ 'ಹಸಿರು ಸೇನೆ' ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ18 Dec 2018 6:28 PM IST
share
ಸಾಲಕ್ಕಾಗಿ ರೈತರ ಜಮೀನು ಹರಾಜಿಗೆ ಮುಂದಾದರೆ ಸರ್ಕಾರ 3 ಗಂಟೆಯೂ ಉಳಿಯಲ್ಲ: ಬಸವರಾಜಪ್ಪ

ಪುತ್ತೂರು, ಡಿ. 18: 'ಮುಖ್ಯಂಂತ್ರಿಗಳೇ ನಿಮಗೆಷ್ಟು ಶಕ್ತಿ ಇದೆಯಾ ಅಷ್ಟು ರೈತರ ಸಾಲ ಮನ್ನಾ ಮಾಡಿ, ಸಂಪೂರ್ಣ ಸಾಲ ಮನ್ನಾ ಆಗುವ ತನಕ ನಾವಂತೂ ಸಾಲ ಪಾವತಿಸುವುದಿಲ್ಲ. ಸಾಲ ವಿಚಾರದಲ್ಲಿ ಮನೆ-ಮಠ ಜಫ್ತಿ ಮಾಡುವ ಅವಕಾಶವೂ ಕಾನೂನಿನಲ್ಲಿ ಇಲ್ಲ. ರಾಜ್ಯದಲ್ಲಿ ಶೇ 65ರಷ್ಟು ಸಂಖ್ಯೆಯಲ್ಲಿ ರೈತರಿದ್ದು, ಜಮೀನು ಹರಾಜು ಪ್ರಕ್ರಿಯೆಗೆ ಮುಂದಾದರೆ ಸರ್ಕಾರ ಮೂರು ಗಂಟೆಯೂ ಉಳಿಯಲ್ಲ' ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಎಚ್ಚರಿಕೆ ನೀಡಿದರು.

ಅವರು ಕರ್ನಾಟಕ ರಾಜ್ಯ ರೈತಸಂಘ ಹಸಿರು ಸೇನೆ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮತ್ತು ಅಡಿಕೆ ಕೊಳೆರೋಗ ಪರಿಹಾರ ವಿಳಂಬ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ವೈಫಲ್ಯ ವಿರೋಧಿಸಿ ಮತ್ತು ಡಾ.ಎಂ.ಎಸ್.ಸ್ವಾಮೀನಾಥನ್ ವರದಿ ಅನುಷ್ಠಾನ ಹಾಗೂ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಪುತ್ತೂರಿನ ಮಿನಿವಿಧಾನಸೌಧದ ಮುಂಬಾಗ ಮಂಗಳವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. 

ಸಾಲ ಮನ್ನಾ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಚಿವರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಈ ವರ್ಷ ಬಡ್ಡಿ ಮನ್ನಾ ಮಾಡುವುದಾಗಿ ಹೇಳುತ್ತಿದ್ದು, ಸಾಲ ಮನ್ನಾ ವಿಚಾರವೇ ಗೊಂದಲದ ಗೂಡಾಗಿದೆ. ಬ್ಯಾಂಕ್‍ಗಳಲ್ಲಿಯೂ ಈ ಬಗ್ಗೆ ಸ್ಪಷ್ಟತೆ ಇಲ್ಲ. ಸಾಲ ಮನ್ನಾಕ್ಕೆ ಸಂಬಂಧಿಸಿ ಸರ್ಕಾರ ನೂರೆಂಟು ಷರತ್ತುಗಳನ್ನು ವಿಧಿಸಿರುವುದರಿಂದ ಬಹಳಷ್ಟು ಮಂದಿ ರೈತರಿಗೆ ಸಾಲ ಮನ್ನಾ ಆಗುವುದಿಲ್ಲ ಎಂದ ಅವರು ರೈತರು ಈ ವಿಚಾರದಲ್ಲಿ ಹೆದರ ಬೇಕಾಗಿಲ್ಲ. ಕಾನೂನು ಬಾಹಿರವಾಗಿ ಮನೆ-ಮಠ,ಜಮೀನು ಜಫ್ತಿಗೆ ಹಗಲು ಕಳ್ಳರಾಗಿ ಬಂದಲ್ಲಿ ರೈತರು ಪ್ರಾಣ ಕಳೆದುಕೊಳ್ಳುವುದನ್ನು ಬಿಟ್ಟು ಅವರಿಗೆ ತಕ್ಕ ಶಿಕ್ಷೆ ನೀಡಿ ಎಂದು ಹೇಳಿದರು. 

ದೇಶದ ಆಹಾರ ಭದ್ರತೆಗಾಗಿ ಸರ್ಕಾರ ಸಾಲ ನೀಡಿದೆಯೇ ಹೊರತು ರೈತರ ಭದ್ರತೆ ಕಾಪಾಡುವ ಕೆಲಸವನ್ನು ಯಾವ ಸರ್ಕಾರಗಳೂ ಮಾಡಿಲ್ಲ. ಡಾ.ಸ್ವಾಮಿನಾಥನ್ ವರದಿಯನ್ನು ತರಿಸಿಕೊಂಡ ಕಾಂಗ್ರೆಸ್ ಏನೂ ಮಾಡಿಲ್ಲ. ಈ ವರದಿಯನ್ನು ಜಾರಿಗೊಳಿಸುವುದಾಗಿ ವಾಗ್ಧಾನ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿಯೂ ನ್ಯಾಯಿಕ ಬೆಲೆ ಕೊಟ್ಟಿಲ್ಲ. ಇದರಿಂದಾಗಿ ಇಂದು ರೈತ ವರ್ಗಕ್ಕೆ ಬೇಡುವ ಸ್ಥಿತಿ ಬಂದಿದೆ ಎಂದ ಅವರು ನಾವು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡುತ್ತಿದ್ದರೆ ನಮಗೆ ಯಾವ ಸಾಲಮನ್ನವೂ, ಸಬ್ಸಿಡಿಯೂ ಬೇಕಾಗಿಲ್ಲ ಎಂದು ಹೇಳಿದರು. 

ಅಧಿಕಾರಕ್ಕೆ ಬಂದ ಒಂದೇ ಗಂಟೆಯೊಳಗೆ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಮೋದಿಯವರು ನೀಡಿದ ಭರವಸೆ ಈಡೇರಿಸಿಲ್ಲ. ಫಸಲ್ ಭೀಮಾ ಯೋಜನೆ ರೈತ ಪರವಾಗಿಲ್ಲ. ಮಧ್ಯಪ್ರದೇಶದಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಲಾಯಿತು. ರೈತರನ್ನು ದೆಹಲಿಗೆ  ಹೋಗದಂತೆ ತಡೆಯಲಾಯಿತು. ಇದರ ಪರಿಣಾಮವಾಗಿಯೇ ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ರೈತರು ಅವರನ್ನು ರಾಜ್ಯಕ್ಕೆ ಬಾರದಂತೆ ತಡೆಯುವ ಕೆಲಸ ಮಾಡಿ, ರಾಮನ ಜಪ ಮಾಡಿದರೆ ಸಾಲದು ಅದರಿಂದ ಹೊಟ್ಟೆ ತುಂಬುವುದಿಲ್ಲ, ರಾಮನ ಜಪದ ಜತೆಗೆ ರೈತರ ಜಪವನ್ನೂ ಮಾಡಬೇಕು ಎಂಬ ಸಂದೇಶ ರವಾನಿಸಿದ್ದಾರೆ. ರೈತರು ಹಾಗೂ ದುಡಿಯುವ ವರ್ಗದ ಹಿತ ಕಾಯದಿದ್ದರೆ ಮನೆಗೆ ಕಳುಹಿಸುವ ಎಚ್ಚರಿಕೆ ಗಂಟೆ ಬಾರಿಸಿದ್ದಾರೆ ಎಂದರು. 

1970ರ ಅವಧಿಯಲ್ಲಿದ್ದ ಶಿಕ್ಷಕರ ಸಂಬಳ ಶೇ.280ರಷ್ಟು, ರಾಜ್ಯ ಸರ್ಕಾರಿ ನೌಕರರ ಸಂಬಳ ಶೇ.230ರಷ್ಟು ಹಾಗೂ ಕೇಂದ್ರ ಸರ್ಕಾರಿ ನೌಕರರ ಸಂಬಳ ಶೇ.290ರಷ್ಟು ಜಾಸ್ತಿಯಾಗಿದೆ.ಆದರೆ ಸ್ವಾತಂತ್ರ್ಯಾ ಪೂರ್ವದಲ್ಲಿದ್ದ ರೈತರ ಸಮಸ್ಯೆಗಳು ಈಗಲೂ ಹಾಗೆಯೇ ಇದೆ. ಸರ್ಕಾರಿ ನೌಕರರಂತೆ ರೈತರ ಉತ್ಪನ್ನಗಳಿಗೂ ಶೇ 100ರಷ್ಟಾದರೂ ಧಾರಣೆ ಜಾಸ್ತಿ ಮಾಡಿ ಎಂದು ಆಗ್ರಹಿಸಿದರು. ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಜಾತಿ-ಧರ್ಮವಿಲ್ಲ. ನಾವು ಒಂದೇ ಜಾತಿ. ಆದರೆ ಧರ್ಮ-ಜಾತಿ ಆಧಾರಿತ ರಾಜಕೀಯದ ನಡುವೆ ನಾವು ಆಪಕ್ಷ-ಈ ಪಕ್ಷ ಎಂದು ಹೇಳಿಕೊಂಡು ಅದರ ಹಿಂದೆ ಹೋದರೆ, ಉಳಿದ ಸಂಘಟನೆಗಳಂತೆ ರೈತರೂ ಒಗ್ಗಟ್ಟಾಗದಿದ್ದರೆ  ನಮಗೆ ಉಳಿಗಾಲವಿಲ್ಲ ಎಂದು ಎಚ್ಚರಿಸಿದರು. 

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಸಮಿತಿಯ ಸಂಚಾಲಕ ರಾಜು ಹಿಟ್ಟೂರು ಅವರು ಮಾತನಾಡಿ,` ರೈತ ಪ್ರಧಾನ ದೇಶ ಈಗ `ಕಿಸೆ' (ಹಣ) ಪ್ರಧಾನ ದೇಶವಾಗುತ್ತಿದೆ. ಅವಿದ್ಯಾವಂತರಿಗೆ ಹಾಗೂ ಕನಿಷ್ಠ ಶಿಕ್ಷಣ ಪಡೆದವರಿಗೆ ಉದ್ಯೋಗ ನೀಡುವವರು ಈ ದೇಶದ ರೈತರಾಗಿದ್ದರೂ ಇಲ್ಲಿ ರೈತರಿಗೆ ಬೆಲೆ ಇಲ್ಲದಾಗಿದೆ' ಎಂದರು.

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಜಿಲ್ಲಾಧ್ಯಕ್ಷ ಶ್ರೀಧರ್ ರೈ ಬೈಲುಗುತ್ತು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ ಅವರು ಮಾತನಾಡಿದರು. ರಾಜ್ಯ ರೈತ ಸಂಘ-ಹಸಿರುಸೇನೆಯ ಶಿವಮೊಗ್ಗ ಜಿಲ್ಲಾ ಸಮಿತಿಯ ಅಧ್ಯಕ್ಷ ಶೇಖರಪ್ಪ, ದ.ಕ.ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಧರ್ಣಪ್ಪ ಗೌಡ ಇಡ್ಯಾಡಿ, ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ ಭಟ್ ಬಡಿಲ ಮತ್ತು ಹೊನ್ನಪ್ಪ ಗೌಡ ಪರಣೆ, ಗೌರವ ಸಲಹೆಗಾರ ಮುರುವ ಮಹಾಬಲ ಭಟ್, ಕಾರ್ಯದರ್ಶಿ ಈಶ್ವರ ಗೌಡ ಕುಂತೂರು, ಕಡಬ ತಾಲೂಕು ಅಧ್ಯಕ್ಷ ವಿಕ್ಟರ್.ಡಿ.ಸೋಜಾ, ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುದೇಶ್ ಭಂಡಾರಿ, ಸುಳ್ಯ ತಾಲೂಕು ಕಾರ್ಯದರ್ಶಿ ಸಿರಿಲ್ ಕ್ರಾಸ್ತಾ, ಸಂಘಟನೆಯ ಪ್ರಮುಖರಾದ ಸುದೇಶ್ ಮಯ್ಯ, ಶೇಖರ್ ರೈ ಕುಂಬ್ರ, ಸುದರ್ಶನ್ ನಾಯ್ಕ್ ಕಂಪ, ಜಯಪ್ರಕಾಶ್ ರೈ ನೂಜಿಬೈಲು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X