ಡಿ.20ರಿಮದ ಇನ್‌ಸ್ಪೈರ್ ಅವಾರ್ಡ್-2018
ಉಡುಪಿ, ಡಿ.18: ರಾಜ್ಯ ಶಿಕ್ಷಣ ಸಂಶೋಧನೆ ಮತುತಿ ತರಬೇತಿ ಇಲಾಖೆ ಬೆಂಗಳೂರು ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯೆಟ್) ಉಡುಪಿ ಇವರ ಸಹಯೋಗದಲ್ಲಿ ಇನ್‌ಸ್ಪೈರ್ ‘ಅವಾರ್ಡ್-2018’ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳು ಸಿದ್ದಪಡಿಸಿದ ವಿಜ್ಞಾನ ಮಾದರಿಗಳ ಜಿಲ್ಲಾ ಮಟ್ಟದ ಪ್ರದರ್ಶನ ಕಾರ್ಯಕ್ರಮ ಡಿ.20 ಮತ್ತು 21ರಂದು ಉಡುಪಿಯ ಸೈಂಟ್ ಸಿಸಿಲಿ ಸಮೂಹ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ.
ಡಿ.20ರಂದು ಬೆಳ್ಗಗೆ 10:30ಕ್ಕೆ ಸಭಾ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಡಯಟ್‌ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story