ಕದ್ರಿ ಬಾಲ ಯಕ್ಷಕೂಟ ದಶಮ ಸಂಭ್ರಮ ಸಮಾರೋಪ

ಮಂಗಳೂರು, ಡಿ.18: ಹೆಣ್ಣುಮಕ್ಕಳಿಗೆ ಯಕ್ಷಗಾನ ಕಲಿಸುವುದರಿಂದ ಯಕ್ಷಗಾನ ಕ್ಷೇತ್ರ ವಿಸ್ತಾರವಾಗುತ್ತದೆ ಎಂದು ಶ್ರಿಕ್ಷೇತ್ರ ಕಟೀಲಿನ ಆನುವಂಶಿಕ ಅರ್ಚಕ ಕಮಲಾದೇವಿಪ್ರಸಾದ ಅಸ್ರಣ್ಣ ಹೇಳಿದರು. ಕದ್ರಿ ರಾಜಾಂಗಣದಲ್ಲಿ ನಡೆದ ಬಾಲ ಯಕ್ಷಕೂಟ ದಶಮ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಆಶೀವರ್ಚನ ನೀಡಿದರು.
ಉದ್ಯಮಿ ಶ್ರೀಪತಿ ಭಟ್ ಮೂಡುಬಿದಿರೆ ಅಧ್ಯಕ್ಷತೆ ವಹಿಸಿದ್ದರು. ಯಕ್ಷ ವಿಮರ್ಶಕ ಡಾ. ಪ್ರಭಾಕರ ಜೋಷಿ ಸಮಾರೋಪ ಭಾಷಣ ಮಾಡಿದರು. ಧರ್ಮದರ್ಶಿ ಹರಿಕೃಷ್ಣ ಪುನರೂರು, ಪಟ್ಲ ಫೌಂಡೇಶನ್ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕಾರ್ಪೊರೇಟರ್ ಅಶೋಕ್ ಕುಮಾರ್ ಡಿ.ಕೆ., ಮೂಡುಬಿದರೆ ಎಂಸಿಸಿ ಬ್ಯಾಂಕ್‌ನ ಸಿಇಒ ಚಂದ್ರಶೇಖರ, ನಮ್ಮಕುಡ್ಲ ನಿರ್ದೇಶಕ ಲೀಲಾಕ್ಷ ಕರ್ಕೆರ, ಗೌರವಾಧ್ಯಕ್ಷ ದಿನೇಶ್ ದೇವಾಡಿಗ, ಸಂಚಾಲಕ ಎಲ್ಲೂರು ರಾಮಚಂದ್ರ ಭಟ್ ಕದ್ರಿ, ವಾಸುದೇವ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಸಂದರ್ಭ ರಾಷ್ಟ್ರಪ್ರಶಸ್ತಿ ಪುರಷ್ಕೃತ ಕೆ.ಗೋವಿಂದ ಭಟ್, ಕೆ.ಎಲ್. ಕುಂಡಂತಾಯ, ಉಜಿರೆ ಅಶೋಕ ಭಟ್, ದಯಾನಂದ ಕೋಡಿಕಲ್ ಅವರಿಗೆ ದಶಮಾನೋತ್ಸವ ಸನ್ಮಾನ ನಡೆಯಿತು. ವಿದ್ವಾನ್ ಕೃಷ್ಣರಾಜ ನಂದಳಿಕೆ ಮತ್ತು ಮೋಹಿನಿ ಕಲಾ ಸಂಪದ ಯಜಮಾನ ಗಂಗಾಧರ ಶೆಟ್ಟಿಗಾರ್‌ಗೆ ಗೌರವಾರ್ಪಣೆ ನಡೆಯಿತು.
ಉಚಿತವಾಗಿ ಯಕ್ಷಗಾನ ಕಲಿಸುವ ಯಕ್ಷಗುರು ಎಲ್ಲೂರು ರಾಮಚಂದ್ರ ಭಟ್ ಕದ್ರಿ ಮತ್ತು ವನಿತಾ ಎಲ್ಲೂರು ದಂಪತಿಗೆ ಶಿಷ್ಯವೃಂದದವರು ಗುರುನಮನ ಸಲ್ಲಿಸಿದರು. ಜಿತೇಂದ್ರ ಕುಂದೇಶ್ವರ ಅಭಿನಂದನಾ ನುಡಿ ನಮನ ಸಲ್ಲಿಸಿದರು.
ಅಧ್ಯಕ್ಷ ಕೃಷ್ಣ ಭಟ್ ಕದ್ರಿ ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ್ ಹೆಬ್ಬಾರ್ ವಂದಿಸಿದರು. ಆರ್.ಕೆ.ರಾವ್ ಮತ್ತು ಜಯಶ್ರೀ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.