ಮಂಗಳೂರು: ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು, ಡಿ.18: ನಗರದ ಕಾಲೇಜೊಂದರ ವೈದ್ಯಕೀಯ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.
ಮೈಸೂರು ಮೂಲದ ಅಮೃತ್ (23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಕಳೆದ ಕೆಲವು ಸಮಯದಿಂದ ಮಾನಸಿಕ ಒತ್ತಡಕ್ಕೊಳಗಾಗಿದ್ದ ಈತ ಮಂಗಳವಾರ ಸಂಜೆ ಕಂಕನಾಡಿ ಬಳಿಯಿರುವ ಶಿಕ್ಷಣ ಸಂಸ್ಥೆಗೆ ಸೇರಿದ ಹಾಸ್ಟೆಲ್ ನ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರು ಎನ್ನಲಾಗಿದೆ.
ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story