ಸಾರಿಗೆ ಸಮಸ್ಯೆ ಮಾಹಿತಿ ನೀಡಲು ದ.ಕ. ಜಿಲ್ಲಾಡಳಿತದಿಂದ ಉಚಿತ ಆ್ಯಪ್: ಸಸಿಕಾಂತ್ ಸೆಂಥಿಲ್

ಮಂಗಳೂರು, ಡಿ.19: ರಸ್ತೆ ಸಾರಿಗೆ ವ್ಯವಸ್ಥೆ ಸಮಸ್ಯೆಗಳನ್ನು ದಾಖಲಿಸಲು ಸಾರ್ವಜನಿಕರ ಬಳಕೆಗಾಗಿ ದ.ಕ. ಜಿಲ್ಲಾಡಳಿತ ವತಿಯಿಂದ ಆ್ಯಪ್ ಒಂದನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಸ್ತೆ, ಸಾರಿಗೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಸಿಕಾಂತ ಸೆಂಥಿಲ್ ತಿಳಿಸಿದ್ದಾರೆ.
ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಹಮ್ಮಿಕೊಂಡ ರಸ್ತೆ ಸಾರಿಗೆ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡುತ್ತಿದ್ದರು.
ರಸ್ತೆ, ಸಾರಿಗೆ ಇಲಾಖೆಯ ದೂರುಗಳನ್ನು ದಾಖಲಿಸಲು ಮತ್ತು ಮಾಹಿತಿ ವಿನಿಮಯಕ್ಕಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಚಿಂತನೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಸಾರ್ವಜನಿಕರು ಬಳಸಬಹುದಾದ ಆ್ಯಪ್ ಒಂದನ್ನು ಮುಂದಿನ ನಾಲ್ಕು ತಿಂಗಳ ಒಳಗಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
Next Story