ಶಬರಿಮಲೆ ವಿವಾದ: ನಿಷೇಧಾಜ್ಞೆ ಡಿಸೆಂಬರ್ 22 ರವರೆಗೆ ವಿಸ್ತರಣೆ
ಪಟ್ಟಣಂತಿಟ್ಟ,ಡಿ.19: ಇಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಶಬರಿಮಲೆ ದೇಗುಲದ ಸುತ್ತಮುತ್ತ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು ಡಿಸೆಂಬರ್ 22ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ಪಂಪಾ ಮತ್ತು ಸನ್ನಿಧಾನದಲ್ಲಿರುವ ಜಿಲ್ಲಾ ಪೊಲೀಸ್ ಮುಖ್ಯಸ್ಥ ಮತ್ತು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಅವರ ವರದಿಯನ್ನು ಆಧರಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಸೆಕ್ಷನ್ 144 ಅಡಿ ವಿಧಿಸಲಾಗಿರುವ ನಿಷೇಧಾಜ್ಞೆಯ ಪ್ರಕಾರ, ಒಂದು ಪ್ರದೇಶದಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಶಬರಿಮಲೆ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರು ಪ್ರವೇಶಿಸಬಹುದು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶದ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆದು ಹಿಂಸೆಗೆ ತಿರುಗಿದ್ದವು. ಈ ಹಿನ್ನೆಲೆಯಲ್ಲಿ ಶಬರಿಮಲೆ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.
Next Story