ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ವಿಚಾರಣೆ ನಡೆಸಿದ ನಿರ್ದೇಶನಾಲಯ

ಹೊಸದಿಲ್ಲಿ, ಡಿ. 19: ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಬುಧವಾರ ಹೊಸದಿಲ್ಲಿಯಲ್ಲಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸಿತು.
ಇಂಡಿಯಾ ಗೇಟ್ ಸಮೀಪ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಚಿದಂಬರಂ ಅವರು ತಮ್ಮ ವಕೀಲನೊಂದಿಗೆ ಪೂರ್ವಾಹ್ನ 11.55ಕ್ಕೆ ಆಗಮಿಸಿದರು. 73 ಹರೆಯದ ಕೇಂದ್ರದ ಮಾಜಿ ಹಣಕಾಸು ಹಾಗೂ ಗೃಹ ಸಚಿವರನ್ನು ಜಾರಿ ನಿರ್ದೇಶನಾಲಯ ಪ್ರಶ್ನಿಸುತ್ತಿರುವುದು ಇದೇ ಮೊದಲು. ಮಾಜಿ ಮಾದ್ಯಮ ಉದ್ಯಮಿ ಪೀಟರ್ ಮುಖರ್ಜಿ ಹಾಗೂ ಇಂದ್ರಾಣಿ ಮುಖರ್ಜಿ ಪ್ರಾಯೋಜಿತ ಉದ್ಯಮ ಐಎನ್‌ಎಕ್ಸ್‌ಗೆ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿ (ಎಫ್‌ಐಪಿಬಿ)ಯಿಂದ ಅನುಮತಿ ಒದಗಿಸಿರುವುದಕ್ಕೆ ಸಂಬಂಧಿಸಿ ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ತನಿಖೆಗೆ ಒಳಪಡಿಸಿದೆ.
ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದಾಗ 2007ರಲ್ಲಿ ಈ ಭ್ರಷ್ಟಾಚಾರ ನಡೆದಿದೆ ಎಂದು ಹೇಳಲಾಗಿದೆ.
Next Story





