Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.23ರಂದು ಪತ್ರಕರ್ತರ ಗ್ರಾಮ ವಾಸ್ತವ್ಯ

ಡಿ.23ರಂದು ಪತ್ರಕರ್ತರ ಗ್ರಾಮ ವಾಸ್ತವ್ಯ

ವಾರ್ತಾಭಾರತಿವಾರ್ತಾಭಾರತಿ19 Dec 2018 10:13 PM IST
share

ಮಂಗಳೂರು,ಡಿ.19: ಜಿಲ್ಲೆಯ ಹಿಂದುಳಿದ ಗ್ರಾಮಗಳನ್ನು ಅಭಿವೃದಿಪಡಿಸುವ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಿನೂತನ ಯೋಜನೆಯಾಗಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರ ಡಿ.23ರಂದು ಬೆಳಗ್ಗೆ 9ರಿಂದ ಕುತ್ಲೂರು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅಕ್ಟೋಬರ್ 14ರಂದು ಮಂಗಳೂರಿನ ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸ್ವಚ್ಛ ಸುಂದರ  ಸೌಹಾರ್ದ, ಆರೋಗ್ಯವಂತ ಸಮಾಜವನ್ನು ಕಟ್ಟುವ ಪತ್ರಕರ್ತರ ಕನಸಿನ ಯೋಜನೆಯಾಗಿರುವ  ಬ್ರಾಂಡ್ ಮಂಗಳೂರು ಮತ್ತು ಗ್ರಾಮ ವಾಸ್ತವ್ಯ  ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದರು.  

ಪ್ರತಿ ವರ್ಷ ಜಿಲ್ಲೆಯ ಒಂದು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಆ ಗ್ರಾಮಗಳನ್ನು ಅಭಿವೃದ್ಧಿ ಪಡಿಸುವುದು ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಕನಸಾಗಿದೆ. 2018 -19ನೇ ಸಾಲಿನಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವನ್ನು ಅಭಿವೃದ್ಧಿಯ ಮುಖ್ಯವಾಹಿನಿಗೆ ತರುವ ಯೋಜನೆಯನ್ನು ಹಾಕಿಕೊಂಡಿದೆ. ಪತ್ರಕರ್ತರ ಈ ಯೋಜನೆಗೆ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ದ.ಕ. ಜಿಲ್ಲಾ ಪಂಚಾಯತ್ , ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ನಾರಾವಿ ಗ್ರಾಮ ಪಂಚಾಯತ್ ಕೈ ಜೋಡಿಸಿದೆ. 

ಕುದುರೆಮುಖ ರಾಷ್ಟ್ರೀಯ ಉದ್ಯಾವನದ ಬಳಿಯಿರುವ ಬೆಳ್ತಂಗಡಿ ತಾಲೂಕಿನ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಗ್ರಾಮ ಕುತ್ಲೂರು. ಆ ಹಿನ್ನೆಲೆಯಲ್ಲಿ ಗ್ರಾಮ ಜನರ ಬಳಿ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ, ಅವರೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಲ್ಲದೆ, ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಉದ್ದೇಶವಾಗಿದೆ .

ಗ್ರಾಮವಾಸ್ತವ್ಯದಲ್ಲಿ ಜಿಲ್ಲೆಯ ನಾನಾ ಇಲಾಖೆಗಳ ಅಧಿಕಾರಿಗಳು ಕುತ್ಲೂರಿಗೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಸ್ವೀಕರಿಸಲಿದ್ದಾರೆ. ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿದ್ದಾರೆ. ಗ್ರಾಮಸ್ಥರಿಂದ ವಿವಿಧ ಇಲಾಖಾ ಅಧಿಕಾರಿಗಳಿಂದ ಅಹವಾಲು ಸ್ವೀಕಾರ ಮಾಡಲಿದ್ದಾರೆ.

ಉದ್ಘಾಟನೆ: ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಉದ್ಘಾಟಿಸಲಿದ್ದಾರೆ. ದ.ಕ.ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ವೈದ್ಯಕೀಯ ಶಿಬಿರ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಆರ್. ರವಿಕಾಂತೇಗೌಡ ಸಂವಾದಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ಮನೋಹರ ಬಳಂಜ, ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರವೀಂದ್ರ ಪೂಜಾರಿ ಉಪಸ್ಥಿತರಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ವಹಿಸಲಿದ್ದಾರೆ.

ಉಚಿತ ವೈದ್ಯಕೀಯ ತಪಾಸಣೆ: ಇದೇ ಸಂದರ್ಭದಲ್ಲಿ ಮಂಗಳೂರಿನ ಎ.ಜೆ. ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆ ಹಾಗೂ ಆಸ್ಪತ್ರೆಯ ವತಿಯಿಂದ ತಜ್ಞ ವೈದ್ಯರ ತಂಡದಿಂದ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ತನಕ ಉಚಿತ ವೈದ್ಯಕೀಯ ತಪಾಸಣೆ ನಡೆಯಲಿದೆ.

ಸಂವಾದ ಕಾರ್ಯಕ್ರಮ: 2ರಿಂದ 3 ಗಂಟೆಯವರೆಗೆ ಪತ್ರಕರ್ತರೊಂದಿಗೆ ಗ್ರಾಮಸ್ಥರ ಸಂವಾದ, 3 ಗಂಟೆಯಿಂದ 3.30 ಜನಪ್ರನಿಧಿಗಳೊಂದಿಗೆ ಸಂವಾದ ನಡೆಯಲಿದೆ. ಈ ಸಂದರ್ಭ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಕುಮಾರ್ ಉಪಸ್ಥಿತರಿರುವರು. 3.30ರಿಂದ ಅಧಿಕಾರಿಗಳೊಂದಿಗೆ ಗ್ರಾಮಸ್ಥರ ಸಂವಾದ ನಡೆಯಲಿದೆ. ಸಂಜೆ 4ಗಂಟೆಗೆ ಸಮಾರೋಪ ನಡೆಯಲಿದ್ದು, ದ.ಕ. ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಸಮಾರೋಪ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಜೆ. ಸಜೀತ್, ಪುತ್ತೂರು ಸಹಾಯಕ  ವಿಭಾಗ ಅಧಿಕಾರಿ  ಕೃಷ್ಣಮೂರ್ತಿ, ಎ.ಜೆ. ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ್ ಬಳಂಜ ಉಪಸ್ಥಿತರಿರುವರು. ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಜೆ 5ರಿಂದ 6ಗಂಟೆಯವರೆಗೆ ಕುತ್ಲೂರು ಗ್ರಾಮದ ಹಿರಿಯರೊಂದಿಗೆ ಪತ್ರಕರ್ತರ ಚಾವಡಿ ಚರ್ಚೆ, 6 ಗಂಟೆಯ ಬಳಿಕ ಪತ್ರಕರ್ತರ ಕುತ್ಲೂರು ಗ್ರಾಮದ ಮನೆಯಲ್ಲಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ  ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X