ಫಲಾಹ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಮಂಗಳೂರು, ಡಿ.19: ತಲಪಾಡಿ ಸಮೀಪದ ಕೆ.ಸಿ ರೋಡಿನ ವಿದ್ಯಾನಗರದಲ್ಲಿರುವ ಫಲಾಹ್ ವಿದ್ಯಾ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಫಲಾಹ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಹಾಜಿ ಯು.ಬಿ. ಮುಹಮ್ಮದ್ ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಸಂಸ್ಥೆಯ ಕೋಶಾಧಿಕಾರಿ ಇಸಾ್ಮಯೀಲ್ ನಾಗತೋಟ ಮಾತನಾಡಿದರು.
ಕಾರ್ಯದರ್ಶಿ ಟಿ.ಎಂ. ಬಶೀರ್, ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೈನ್, ಪ್ರಾಥಮಿಕ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕಿ ವಿದ್ಯಾ ಡಿಸೋಜ, ದೈಹಿಕ ಶಿಕ್ಷಣ ಶಿಕ್ಷಕ ಭರತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕ ಮುಹಮ್ಮದ್ ರಫೀಕ್ ಸ್ವಾಗತಿಸಿದರು. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಆಯಿಶಾ ಸಬೀನಾ ಕೈಸಿರಾನ್ ವಂದಿಸಿದರು. ಶಿಕ್ಷಕಿ ಸ್ನೇಹಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
Next Story