ಡಿ.21ರಂದು ಎಐಬಿಇಸಿ ರಾಷ್ಟ್ರದಾದ್ಯಂತ ಪ್ರತಿಭಟನೆ
ಬೆಂಗಳೂರು, ಡಿ.19: ಭಾರತೀಯ ಬ್ಯಾಂಕುಗಳ ಒಕ್ಕೂಟವು ಕೇಂದ್ರ ಸರಕಾರದ ವಿರುದ್ಧ ಅನೇಕ ಬೇಡಿಕೆಗಳಿಗೆ ಆಗ್ರಹಿಸಿ ಡಿ.21ರಂದು ರಾಷ್ಟ್ರದಾದ್ಯಂತ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಒಕ್ಕೂಟದ ಸದಸ್ಯ ಎಸ್.ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಬ್ಯಾಂಕ್ ನೌಕರರಿಗೆ ವೇತನ ಹಾಗೂ ಪಿಂಚಣಿಯಲ್ಲಿ ತಾರತಮ್ಯ ಮಾಡುತ್ತಿದೆ. ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದ್ದರು ಸರಕಾರ ನೇಮಕಾತಿಯಲ್ಲಿ ವಿಳಂಬ ಮಾಡುತ್ತಿರುವ ಧೋರಣೆ ಸರಿಯಲ್ಲ. ಅಲ್ಲದೆ, ಭಾರತೀಯ ಬ್ಯಾಂಕ್‌ಗಳಲ್ಲಿ 10 ಲಕ್ಷ ಕೋಟಿ ರೂ. ವಸೂಲಾಗದ ಸಾಲವಿದೆ ಎಂದು ಬೇಸರ ವ್ಯಕ್ತಪಡಿಸಿದರು.
Next Story





