ಲೈಂಗಿಕ ಕಿರುಕುಳ ಆರೋಪ: ಶಿಕ್ಷಕ ಬಂಧನ

ಬೆಂಗಳೂರು, ಡಿ.20: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಇಲ್ಲಿನ ಅಶೋಕ ನಗರ ಠಾಣಾ ಪೊಲೀಸರು, ಶಿಕ್ಷಕನೋರ್ವನನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಅನೇಪಾಳ್ಯದ ಮುನೀರ್ ಸಾಬ್ ಎಂಬಾತ ಬಂಧಿತ ಶಿಕ್ಷಕ ಎನ್ನಲಾಗಿದೆ.
ಆರು ತಿಂಗಳಿಂದ ಮನೆಪಾಠಕ್ಕಾಗಿ ಬರುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬರಿಗೆ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ತೋರಿಸಿ, ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಎಂದು ಹೇಳಲಾಗುತ್ತಿದೆ. ಈ ಸಂಬಂಧ ವಿದ್ಯಾರ್ಥಿನಿ ಪೋಷಕರು ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story