ಡಿ.22ರಿಂದ ತರಬಿಯತ್ ಎಜ್ಯಕೇಶನ್ ಸೂಸೈಟಿ 47ನೇ ಶಾಲಾ ವಾರ್ಷಿಕೋತ್ಸವ
ಭಟಳ, ಡಿ. 20: ಇಲ್ಲಿನ ತರಬಿಯತ್ ಎಜ್ಯುಕೇಶನ್ ಸೂಸೈಟಿ ಇದರ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ನ್ಯೂ ಶಮ್ಸ್ ಸ್ಕೂಲ್ ನ 47 ನೇ ಶಾಲಾ ವಾರ್ಷೀಕೋತ್ಸವ ಸಮಾರಂಭವು ಹೆಬಳೆ ಗ್ರಾ.ಪಂ. ವ್ಯಾಪ್ತಿಯ ಜಾಮಿಯಾಬಾದ್ ರಸ್ತೆಯ ಸೈಯ್ಯದ್ ಅಲಿ ಕ್ಯಾಂಪಸ್ ನಲ್ಲಿ ಡಿ.22 ಹಾಗೂ 23 ರಂದು ನಡೆಯಲಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ಮೊಹತೆಶಮ್ ವಹಿಸಲಿದ್ದಾರೆ. ಅಂದು ರಾತ್ರಿ 8 ಗಂಟೆಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಡಿ.23 ರಂದು ಮಹಿಳೆಯರಿಗಾಗಿ ನಡೆಯುವ ಕಾರ್ಯಕ್ರಮದಲ್ಲಿ ಖಾನೇತಾ ಘನಿ ರಾಮಪುರ್ ಮುಖ್ಯ ಅತಿಥಿಯಾಗಿ, ಫರ್ಹಾ ಬಿಲಾಲ್ ರುಕ್ನುದ್ದೀನ್ ಗೌರವ ಅತಿಥಿಯಾಗಿ ಉಪಸ್ಥಿತರಿರುವರು. ಸಭಿಹಾ ಫಾರೂಖ್ ಕೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Next Story