ಸಿಪಿಎಂನ ಕರ್ನಾಟಕ ಕಾರ್ಯದರ್ಶಿ ಜಿ.ವಿ. ಶ್ರೀರಾಮ ರೆಡ್ಡಿ ವಜಾ
ಹೊಸದಿಲ್ಲಿ, ಡಿ. 20: ‘ಗಂಭೀರ ದುರ್ನಡತೆ’ ಆರೋಪದ ಹಿನ್ನೆಲೆಯಲ್ಲಿ ತನ್ನ ಕೇಂದ್ರ ಸಮಿತಿ ಸದಸ್ಯ ಹಾಗೂ ಕರ್ನಾಟಕದ ಕಾರ್ಯದರ್ಶಿ ಜಿ.ವಿ. ಶ್ರೀರಾಮ ರೆಡ್ಡಿ ಅವರನ್ನು ಸಿಪಿಐ (ಎಂ) ಗುರುವಾರ ವಜಾಗೊಳಿಸಿದೆ.
ಹೊಸದಿಲ್ಲಿಯಲ್ಲಿ ಡಿಸೆಂಬರ್ 15 ಹಾಗೂ 16ರಂದು ನಡೆದ ಪಕ್ಷದ ಕೇಂದ್ರ ಸಮಿತಿಯ ಸಬೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಪಿಐ (ಎಂ)ನ ಹೇಳಿಕೆ ತಿಳಿಸಿದೆ.
ಗಂಭೀರ ದುರ್ನಡತೆ ಆರೋಪದಲ್ಲಿ ಜಿ.ವಿ. ಶ್ರೀರಾಮ ರೆಡ್ಡಿ ಅವರನ್ನು ಕೇಂದ್ರ ಸಮಿತಿ ಸದಸ್ಯತ್ವ ಹಾಗೂ ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಲು ಸಭೆಯಲ್ಲಿ ಪಕ್ಷದ ಎಲ್ಲಾ ಸದಸ್ಯರು ನಿರ್ಧರಿಸಿದರು. ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಹಾಗೂ ಪಾಲಿಟ್ ಬ್ಯೂರೊ ಸದಸ್ಯರು ಪಾಲ್ಗೊಂಡ ಬೆಂಗಳೂರಿನಲ್ಲಿ ಡಿಸೆಂಬರ್ 18ರಂದು ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಕರ್ನಾಟಕದ ಕಾರ್ಯದರ್ಶಿಯನ್ನಾಗಿ ಯು. ಬಸವರಾಜು ಅವರನ್ನು ಸರ್ವಸಮ್ಮತವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿಕೆ ತಿಳಿಸಿದೆ.
Next Story